ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರದಿಂದ ಎರಡು ದಿನಗಳ ಕಾಲ ಕುವೈತ್ ಗೆ ಭೇಟಿ ನೀಡಲಿದ್ದು, 43 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಗಲ್ಫ್ ರಾಷ್ಟ್ರಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲು. ಈ ಭೇಟಿಯು ಭಾರತ ಮತ್ತು ಕುವೈತ್ ನಡುವಿನ ಬಹುಮುಖಿ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಅವಕಾಶವನ್ನು ಒದಗಿಸುತ್ತದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ಹೇಳಿದೆ. ಹಲಾ ಮೋದಿ ಮೆಗಾ ಡಯಾಸ್ಪೋರಾ ಕಾರ್ಯಕ್ರಮಕ್ಕೆ ವೇದಿಕೆ ಸಿದ್ಧವಾಗಿದ್ದು, ಸುಮಾರು 5,000 ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಸಚಿವಾಲಯ ತಿಳಿಸಿದೆ.