Home » ಅಡ್ವಾಣಿ ಮತ್ತೆ ಅಪೋಲೋ ಆಸ್ಪತ್ರೆಗೆ ದಾಖಲು
 

ಅಡ್ವಾಣಿ ಮತ್ತೆ ಅಪೋಲೋ ಆಸ್ಪತ್ರೆಗೆ ದಾಖಲು

by Kundapur Xpress
Spread the love

ನವದೆಹಲಿ : ಬಿಜೆಪಿ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಲಾಲ್‌ ಕೃಷ್ಣ ಅಡ್ವಾಣಿ (ಅವರಿಗೆ ಮತ್ತೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಬುಧವಾರ ಅವರನ್ನು ಇಲ್ಲಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಬುಧವಾರ ಕೂಡಾ ಅಡ್ವಾಣಿ ಅನಾರೋಗ್ಯಕ್ಕೆ ತುತ್ತಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಏಮ್ಸ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾ ಗಿತ್ತು. ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಮಾರನೇ ದಿನ ಅವರನ್ನು ಬಿಡುಗಡೆ ಮಾಡಲಾಗಿತ್ತು. ಅದರ ಬೆನ್ನಲ್ಲೇ ಅಡ್ವಾಣಿ ಅವರಿಗೆ ಮರಳಿ ಅನಾರೋಗ್ಯ ಕಾಣಿಸಿ ಕೊಂಡಿದೆ. ‘ಸದ್ಯ ಅಡ್ವಾಣಿ ಅವರ ಆರೋಗ್ಯದ ಮೇಲೆ ಹಿರಿಯ ವೈದ್ಯರ ತಂಡ ನಿಗಾ ಇಟ್ಟಿದೆ. ಅವರ ಆರೋಗ್ಯ ಸ್ಥಿರವಾಗಿದೆ. ನರರೋಗ ತಜ್ಞರು ಅವರನ್ನು ನೋಡಿಕೊಳ್ಳುತ್ತಿದ್ದಾರೆ’ ಎಂದು ಅಪೋಲೋ ಆಸ್ಪತ್ರೆ ಹೇಳಿಕೆಯಲ್ಲಿ ತಿಳಿಸಿದೆ. ಆದರೆ ಯಾವ ಆರೋಗ್ಯ ಸಮಸ್ಯೆ ಎಂಬುದನ್ನು ಹೇಳಿಲ್ಲ. 3 ಬಾರಿ ಬಿಜೆಪಿ ಅಧ್ಯಕ್ಷರಾಗಿ, ಒಮ್ಮೆ ಕೇಂದ್ರ ಗೃಹ ಸಚಿವರಾಗಿ, ಒಮ್ಮೆ ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿದ ಹಿರಿಮೆ ಹೊಂದಿರುವ ಅಡ್ವಾಣಿಗೆ ಕೆಲ ಸಮಯದ ಹಿಂದೆ ‘ಭಾರತ ರತ್ನ’ ಪ್ರಕಟಿಸಲಾಗಿತ್ತು.

   

Related Articles

error: Content is protected !!