ಹೊಸದಿಲ್ಲಿ : ಮಹಾರಾಷ್ಟ್ರ ವಿಧಾನಸಭೆಗೆ ಇಂದು ಬುಧವಾರ ಚುನಾವಣೆ ನಡೆಯಲಿದ್ದು ಎಲ್ಲಾ 288 ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಬೆಳಗ್ಗೆ 7.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಮತದಾನ ನಡೆಯಲಿದೆ. ಅಂತೆಯೇ ಜಾರ್ಖಂಡ್ ವಿಧಾನಸಭಾ ಚುನಾವಣೆಯ ಎರಡನೇ ಹಂತದಲ್ಲಿ 38 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮೊದಲ ಹಂತದ ಚುನಾವಣೆ ನ.13ರಂದು ನಡೆದಿದ್ದು 43 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳ ಚುನಾವಣಾ ಫಲಿತಾಂಶ ನ.23ರಂದು ಹೊರಬೀಳಲಿದೆ. ಇದಕ್ಕೂ ಮುನ್ನ ಬುಧವಾರ ಸಂಜೆ ವೇಳೆಗೆ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಲಿವೆ