ಮುಂಬೈ : ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ (ಶಿಂಧೆ ಬಣ) ಎನ್‌ಸಿಪಿ (ಅಜಿತ್ ಪವಾರ್ ಬಣ) ಮೈತ್ರಿಯ ‘ಮಹಾಯುತಿ’ (ಎನ್‌ಡಿಎ) ಒಕ್ಕೂಟ ಭಾರೀ ಜಯಭೇರಿ ಬಾರಿಸಿದೆ. ಅದರಲ್ಲೂ ಮಹಾಯುತಿ ಮೈತ್ರಿಯೊಳಗೇ ಶಿವಸೇನೆ ಮತ್ತು ಎನ್‌ಸಿಪಿಯನ್ನೂ ಮೀರಿಸಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. ಅದರೊಂದಿಗೆ, ಏಕನಾಥ್ ಶಿಂಧೆಯಿಂದ ಮುಖ್ಯಮಂತ್ರಿ ಸ್ಥಾನವನ್ನು ಈ ಬಾರಿ ಬಿಜೆಪಿ ಕಸಿದುಕೊಳ್ಳುವುದು ಬಹುತೇಕ ನಿಶ್ಚಿತವಾಗಿದೆ
ಮಹಿಳಾ ಮತದಾರರನ್ನು ಸೆಳೆಯಲು ಅವರಿಗೆ ಪ್ರತಿ ತಿಂಗಳು ನಿರ್ದಿಷ್ಟ ಮೊತ್ತದ ಹಣ ನೀಡುವ ‘ಲಡ್ಡಿ ಬೆಹೆನ್ ಯೋಜನೆ ಮಹಾಯುತಿ ಮೈತ್ರಿಕೂಟದ ಪರವಾಗಿ ಜಾದೂ ಮಾಡಿದ ಪರಿಣಾಮ ಈ ಮಟ್ಟದ ಜಯ ಸಾಧ್ಯವಾಗಿದೆ ಎಂದು ವಿಶ್ಲೇಷಿಸಲಾಗಿದೆ.
ಈ ಚುನಾವಣೆಯಲ್ಲಿ ಬಿಜೆಪಿಯ ಸಾಧನೆ ಮಹಾರಾಷ್ಟ್ರದ ಚುನಾವಣಾ ಇತಿಹಾಸದಲ್ಲೇ ಆ ಪಕ್ಷ ತೋರಿದ ಅತ್ಯುತ್ತಮ ಪ್ರದರ್ಶನವಾಗಿದೆ. ಇದೇ ವೇಳೆ, ಕಾಂಗ್ರೆಸ್‌ನ ಪ್ರದರ್ಶನವು ಮಹಾರಾಷ್ಟ್ರ ಕಾಂಗ್ರೆಸ್‌ನ ಇತಿಹಾಸದಲ್ಲೇ ಆ ಪಕ್ಷ ಅತ್ಯಂತ ಕಳಪೆ ಪ್ರದರ್ಶನಗಳಲ್ಲಿ ಒಂದಾಗಿದೆ