ಶಬರಿಮಲೆ : ಪವಿತ್ರ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಮಂಗಳವಾರ ಮಕರಜ್ಯೋತಿ ದರ್ಶನವಾಗಲಿದ್ದು, ದೇಶಾದ್ಯಂತ ಲಕ್ಷಾಂತರ ಭಕ್ತರು ಭೇಟಿ ನೀಡುವ ನಿರೀಕ್ಷೆ ಇದೆ. ಸಂಜೆ 6.00 ಗಂಟೆಯಿಂದ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ವಿವಿಧ ಕಾರ್ಯಕ್ರಮಗಳು ಶುರುವಾಗಲಿದೆ. ಸಂಜೆ 6.00 ಗಂಟೆ ವೇಳೆಗೆ ಶಬರಿಮಲೆಯ ಪೊನ್ನಂಬಾಲಮೇಡು ಬೆಟ್ಟದಲ್ಲಿ ಮಕರಜ್ಯೋತಿ ಕಾಣಿಸಲಿದೆ.