103
ನವದೆಹಲಿ : ಮತ್ತೊಮ್ಮೆ ಹೇಳುತ್ತೇನೆ ಪಹಲ್ಗಾಮ್ ಉಗ್ರ ದಾಳಿ ಸಂತ್ರಸ್ಥರಿಗೆ ನ್ಯಾಯ ಸಿಕ್ಕೆ ಸಿಗುತ್ತದೆ 26 ಮಂದಿಯನ್ನು ಬಲಿ ಪಡೆದ ಭಯೋತ್ಪಾದಕರು ಮತ್ತು ದಾಳಿ ಹಿಂದಿನ ರೂವಾರಿಗಳಿಗೆ ಕಠಿಣ ಶಿಕ್ಷೆ ಆಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಈ ಮೂಲಕ ಉಗ್ರರು ಮತ್ತು ಉಗ್ರ ಪೋಷಕ ರಾಷ್ಟ್ರ ಪಾಕಿಸ್ತಾನಕ್ಕೆ ಕಠಿಣ ಶಿಕ್ಷೆ ಕಾದಿದೆ ಎಂಬ ಸಂದೇಶವನ್ನು ಮತ್ತೆ ರವಾನಿಸಿದ್ದಾರೆ.
ಭಾನುವಾರ ಪ್ರಸಾರಗೊಂಡ ಮಾಸಿಕ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಪಹಲ್ಗಾಂ ದಾಳಿ ಕುರಿತು ಪ್ರಸ್ತಾಪಿಸಿದ ಅವರು, ಈ ದಾಳಿಯ ಚಿತ್ರಗಳನ್ನು ನೋಡುವಾಗ ಪ್ರತಿ ಭಾರತೀಯನ ರಕ್ತ ಕೊತಕೊತ ಕುದಿಯುತ್ತಿದೆ. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಇಡೀ ವಿಶ್ವ ಭಾರತದ ಬೆನ್ನಿಗೆ ನಿಂತಿದೆ. ಕಾಶ್ಮೀರ ಕಣಿವೆಯಲ್ಲಿ ಶಾಂತಿ ನೆಲೆಸುತ್ತಿರುವಾಗ, ಶಾಲೆ ಹಾಗೂ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾಗುತ್ತಿರುವಾಗ ಈ ದಾಳಿಯು ಪಾಕಿಸ್ಥಾನ ಬೆಂಬಲಿತ ಉಗ್ರರ ಹತಾಶೆ ಮತ್ತು ಹೇಡಿತನವನ್ನು ತೋರಿಸುತ್ತದೆ ಎಂದರು.

