Home » ಮಣಿಪುರದಲ್ಲಿ ಮತ್ತೆ ಹಿಂಸಾಚಾರ : ನಿಷೇಧಾಜ್ಞೆ ಜಾರಿ
 

ಮಣಿಪುರದಲ್ಲಿ ಮತ್ತೆ ಹಿಂಸಾಚಾರ : ನಿಷೇಧಾಜ್ಞೆ ಜಾರಿ

by Kundapur Xpress
Spread the love

ಇಂಫಾಲ್ : ಜನಾಂಗೀಯ ಸಂಘರ್ಷ ಪೀಡಿತ ಮಣಿಪುರದಲ್ಲಿ ಇತ್ತೀಚೆಗೆ ಉಗ್ರರಿಂದ ಅಪಹರಣಕ್ಕೆ ಒಳಗಾಗಿದ್ದರು ಎನ್ನಲಾದ 6 ಜನರ ಮೃತದೇಹಗಳು ಜಿರಿಬಾಂ ಜಿಲ್ಲೆಯಲ್ಲಿ ಪತ್ತೆಯಾಗಿವೆ. ಇದರ ಬೆನ್ನಲ್ಲೇ ಇವರ ಸಾವು ಖಂಡಿಸಿ ರಾಜ್ಯದಲ್ಲಿ ಮತ್ತೆ ಹಿಂಸೆ ಆರಂಭವಾಗಿದೆ. ಉದ್ರಿಕ್ತರು ಮುಖ್ಯಮಂತ್ರಿ, ಇಬ್ಬರು ಬಿಜೆಪಿ ಸಚಿವರು ಹಾಗೂ 3 ಶಾಸಕರ ಮನೆಗಳಿಗೆ ದಾಳಿ ಮಾಡಿದ್ದಾರೆ

ದಾಳಿಗೊಳಗಾದ ಮನೆಗಳಲ್ಲಿ ಮುಖ್ಯಮಂತ್ರಿ ಬೀರೇನ್ ಸಿಂಗ್ ಅವರ ಇಂಫಾಲ್‌ನ ಖಾಸಗಿ ನಿವಾಸ ಹಾಗೂ ಅಳಿಯನಾಗಿರುವ ಶಾಸಕನ ಮನೆಯೂ ಸೇರಿದೆ. ಈ ವೇಳೆ ಬೀರೇನ್ ಮನೆಯಲ್ಲಿರಲಿಲ್ಲ. ಕಚೇರಿಯಲ್ಲಿ ಸುರಕ್ಷಿತವಾಗಿದ್ದರು ಎಂದು ಮೂಲಗಳು ಹೇಳಿವೆ. ಉದ್ರಿಕ್ತರ ಚದುರಿಸಲು ಪೊಲೀಸರು ಲಾಠಿ, ಅಶ್ರುವಾಯು ಪ್ರಯೋಗಿಸಿದ್ದಾರೆ. ಇಂಫಾಲ್‌ನಲ್ಲಿ ವ್ಯಾಪಾರ ವಹಿವಾಟುಗಳು ಸ್ಥಗಿತವಾಗಿದ್ದು ಇಂಫಾಲ್‌ನ ಪಶ್ಚಿಮ ಭಾಗಗಳಲ್ಲಿ ಟೈರ್‌ಗಳಿಗೆ ಬೆಂಕಿಯಿಟ್ಟು ಪ್ರತಿಭಟಿಸಲಾಗಿದೆ

   

Related Articles

error: Content is protected !!