149
ಪುಲ್ಗಾಮ್ : ಲಷ್ಕರ್ ಎ ತೊಯ್ದಾ ಸಂಘಟನೆಯ ಕಮಾಂಡರ್ ಸೈಫುಲ್ಲಾ ಕಸೂರಿ ಅಲಿಯಾಸ್ ಖಾಲಿದ್ ಎಂಬಾತ ಪಹಲ್ಗಾಂ ಅಮಾನವೀಯ ದಾಳಿಯ ಮಾಸ್ಟರ್ ಮೈಂಡ್ ಎಂದು ಗುಪ್ತಚರ ಸಂಸ್ಥೆಗಳು ಗುರುತಿಸಿವೆ.
ಈತನೊಂದಿಗೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇಬ್ಬರು ಕೈಜೋಡಿಸಿರುವ ಶಂಕೆಯೂ ಇದೆ. ಗುಪ್ತಚರ ಸಂಸ್ಥೆಗಳ ಪ್ರಕಾರ, ಇತ್ತೀಚೆಗೆ ಗಡಿ ನುಸುಳಿ ಕಾಶ್ಮೀರದ ಕಣಿವೆ ಪ್ರವೇಶಿಸಿದ್ದ 6 – 7 ಉಗ್ರರು ಈ ದಾಳಿ ಮಾಡಿದ್ದಾರೆ.
ಭಾರತಕ್ಕೆ ಬೇಕಾಗಿರುವ (ವಾಂಟೆಡ್) ಉಗ್ರ ಹಫೀಜ್ ಸಯೀದ್‌ನ ಸಹಾಯಕನೂ ಆಗಿದ್ದ ಕಸೂರಿಯ ನಿರ್ದೇಶನದ ಮೇರೆಗೆ ಈ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ. ಘಟನೆ ನಡೆದ ಕೆಲ ಗಂಟೆಗಳ ಬಳಿಕ ದಾಳಿಯ ಹೊಣೆಯನ್ನು ಲಷ್ಕರ್ ಎ ತೊಯ್ದಾ ಸಂಘಟನೆಯ ಅಧೀನ ಸಂಘಟನೆಯಾದ ದ ರೆಸಿಸ್ಟೆಂನ್ಸ್ ಫ್ರಂಟ್ (ಟಿಆರ್ಎಫ್) ಹೊತ್ತುಕೊಂಡಿದೆ.

