91
ನವದೆಹಲಿ : ಇಸ್ಲಾಮಾಬಾದ್ ಮೇಲೆ ಭಾರತದ ದಾಳಿಯನ್ನು ತಡೆಯಲಾಗದೇ ಭಾರೀ ಮುಖಭಂಗಕ್ಕೆ ಒಳಗಾಗಿದ್ದ ಪಾಕಿಸ್ತಾನ ಇದಕ್ಕೆ ಪ್ರತಿಯಾಗಿ ನವದೆಹಲಿ ಮೇಲೂ ದಾಳಿಗೆ ಯತ್ನಿಸಿ ವಿಫಲಗೊಂಡ ಘಟನೆ ನಡೆದಿದೆ.
ನವದೆಹಲಿಯನ್ನು ಗುರಿಯಾಗಿಸಿ ಪಾಕಿಸ್ತಾನದ ಹಾರಿಬಿಟ್ಟ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಭಾರತದ ವಾಯುರಕ್ಷಣಾ ವ್ಯವಸ್ಥೆಗಳು ಪಂಜಾಬ್ ಗಡಿಯಲ್ಲೇ ಯಶಸ್ವಿಯಾಗಿ ಹೊಡೆದುರುಳಿಸಿವೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಂಗ್ ಕಮಾಂಡರ್ ವೋಮಿಕಾ ಸಿಂಗ್ ಮತ್ತು ಕರ್ನಲ್ ಸೋಫಿಯಾ ಖುರೇಷಿ, ‘ಶನಿವಾರ ನಸುಕಿನ 1.40ಕ್ಕೆ ಪಾಕಿಸ್ತಾನ ಅತಿ ವೇಗದ ಕ್ಷಿಪಣಿಯನ್ನು ಉಡಾಯಿಸಿತ್ತು. ಪಂಜಾಬ್ ಮೇಲೆ ಇದು ಹಾರಿ ಬರುವಾಗ ಇದನ್ನು ನಾವು ವಾಯುರಕ್ಷಣಾ ವ್ಯವಸ್ಥೆ ಬಳಸಿ ನಿಷ್ಕ್ರಿಯಗೊಳಿಸಿದೆವು ಎಂದರು

