ಮಹಾರಾಷ್ಟ್ರ : ಇತ್ತೀಚಿಗಷ್ಟೇ ಶಿವಸೇನಾ ನಾಯಕ ಸಂಜಯ್ ರಾವುತ್ ಅವರು ‘ಔರಂಗಜೇಬ್ನಂತೆ ಮೋದಿಯವರನ್ನು ಮಹಾರಾಷ್ಟ್ರದಲ್ಲಿ ಜೀವಂತ ಸಮಾಧಿ ಮಾಡಲಾಗುತ್ತದೆ’ ಎಂದು ನೀಡಿದ ಹೇಳಿಕೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ‘ಕೆಲವು ವಿಪಕ್ಷ ನಾಯಕರು ನನ್ನನ್ನು ಜೀವಂತ ಸಮಾಧಿಯನ್ನಾಗಿ ನೋಡಬೇಕೆಂದು ಬಯಸ್ತಿದ್ದಾರೆ. ಆದರೆ, ದೇಶದ ಜನತೆಯೇ ನನಗೆ ಭದ್ರತಾ ಕವಚ. ಅವರು ನನಗೆ ಹಾನಿಯಾಗಲು ಬಿಡು ವುದಿಲ್ಲ’ ಎಂದು ಗುಡುಗಿದ್ದಾರೆ