26
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಫೆ.10ರಿಂದ ಫ್ರಾನ್ಸ್ ಮತ್ತು ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ.
ಫೆ.10 -12ರವರೆಗೆ ಮೋದಿ ಫ್ರಾನ್ಸ್ ಪ್ರವಾಸ ಕೈಗೊಳ್ಳಲಿದ್ದಾರೆ. ಪ್ಯಾರಿಸ್‌ನಲ್ಲಿ ನಡೆಯುವ ಕೃತಕ ಬುದ್ಧಿಮತ್ತೆ ಕುರಿತ ಜಾಗತಿಕ ಸಮ್ಮೇಳನದಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ, ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರನ್ ಜೊತೆಗೆ ದ್ವಿಪಕ್ಷೀಯ ಮಾತುಕತೆಯನ್ನೂ ನಡೆಸಲಿದ್ದಾರೆ. ಜೊತೆಗೆ ಭಾರತದ ಪಾಲುದಾರಿಕೆ ಇರುವ ಥರ್ಮೋ ನ್ಯೂಕ್ಲಿಯರ್ ಪ್ರಾಯೋಗಿಕ ರಿಯಾಕ್ಟರ್‌ನ ಸ್ಥಳವಾದ ಕ್ಯಾಡರಾಚೆಗೆ ಭೇಟಿ ನೀಡಲಿದ್ದಾರೆ.
ನೌಕಾ ಮಾದರಿಯ ರಫೇಲ್ ವಿಮಾನ ಖರೀದಿಗೂ ಒಪಂದ ಮಾಡಿಕೊಳ್ಳುವ ಸಾಧ್ಯತೆ ಇದೆ. ಅಲ್ಲಿಂದ ಫೆ.12-13 ರವರೆಗೆ ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಡೊನಾಲ್ಡ್ ಟ್ರಂಪ್ ರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ
![](https://kundapurxpress.com/wp-content/uploads/2025/02/WhatsApp-Image-2025-02-05-at-12.29.39-PM.jpeg)
![](https://kundapurxpress.com/wp-content/uploads/2024/11/IMG-20241128-WA0000.jpg)