Home » ಕಾಲ್ತುಳಿತ ದುರಂತ : ಪ್ರಧಾನಿ ಮೋದಿ ಸಂತಾಪ
 

ಕಾಲ್ತುಳಿತ ದುರಂತ : ಪ್ರಧಾನಿ ಮೋದಿ ಸಂತಾಪ

by Kundapur Xpress
Spread the love

ಹೊಸದಿಲ್ಲಿ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಸಂಭವಿಸಿದ ಕಾಲ್ತುಳಿತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿಷಾದ ಹಾಗೂ ದಿಗ್ಧಮೆ ವ್ಯಕ್ತಪಡಿಸಿದ್ದಾರೆ. ಕಾಲ್ತುಳಿತ ದುರಂತವನ್ನು ಹೃದಯ ವಿದ್ರಾವಕ ಎಂದಿರುವ ಮೋದಿ, ಮೃತರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ ಹಾಗೂ ಗಾಯಾಳುಗಳು ಶೀಘ್ರ ಗುಣ ಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ

ಬೆಂಗಳೂರಿನಲ್ಲಿ ನಡೆದ ಅವಘಡ ನಿಜಕ್ಕೂ ಹೃದಯವಿದ್ರಾವಕ. ಈ ದುರಂತದ ಸಮಯದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಸಾಂತ್ವನಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ’ ಎಂದು ಮೋದಿ ತಮ್ಮ ಪ್ರಧಾನಿ ಕಚೇರಿ ಖಾತೆಯಿಂದ ಟ್ವಿಟ್ ಮಾಡಿದ್ದಾರೆ.

 

Related Articles

error: Content is protected !!