150
ನವದೆಹಲಿ : ಜಮ್ಮು ಕಾಶ್ಮೀರದ ಉಗ್ರ ದಾಳಿ ವೇಳೆ ಸೌದಿ ಅರೇಬಿಯಾ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿಂದ ಹಿಂತಿರುಗುವಾಗ ಪಾಕಿಸ್ತಾನದ ವಾಯು ಸೀಮೆ ಬಳಸದೇ ಅರಬ್ಬಿ ಸಮುದ್ರದ ಮೇಲಿನಿಂದ ಬಂದು ಭಾರತ ಪ್ರವೇಶಿಸಿದ್ದಾರೆ. ದಾಳಿಗೂ ಮುನ್ನ ಸೌದಿಗೆ ತೆರಳುವಾಗ ಪ್ರಧಾನಿ ಮೋದಿ ಅವರ ಬೋ ಯಿಂಗ್ 777 ವಿಶೇಷ ವಿಮಾನವು ಪಾಕಿಸ್ತಾನ ವಾಯುಸೀಮೆ ಪ್ರವೇಶಿಸಿಯೇ ಮುಂದೆ ಸಾಗಿತ್ತು. ಆದರೆ ಸೌದಿ ಪ್ರವಾಸ ಅರ್ಧದಲ್ಲಿ ಮೊಟಕು ಗೊಳಿಸಿ ಭಾರತಕ್ಕೆ ಹಿಂದಿರುಗುವಾಗ ಅದು ಪಾಕಿಸ್ತಾನದ ವಾಯು ಪ್ರದೇಶದಲ್ಲಿ ಹಾರಾದೇ ಭಾರತಕ್ಕೆ ಬಂದಿದೆ.

