ಹೊಸದಿಲ್ಲಿ: ಅ.27ರಿಂದ ಜಾರಿಗೆ ಬರಲಿರುವ ಭಾರತೀಯ ಸರಕುಗಳ ಮೇಲಿನ ಅಮೆರಿಕದ ಶೇ.50 ಸುಂಕವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬಲವಾಗಿ ವಿರೋಧಿಸಿದ್ದಾರೆ. ಇದೇ ವೇಳೆ ಅವರು, ಎಷ್ಟೇ ಒತ್ತಡ ಬಂದರೂ ನಾವು ಒಂದು ಮಾರ್ಗವನ್ನು ಕಂಡುಕೊಳ್ಳುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಹಮದಾಬಾದ್‌ನಲ್ಲಿ ಸಾರ್ವಜನಿಕ ಕಾರ್ಯ ಕ್ರಮವೊಂದರಲ್ಲಿ ಮಾತನಾಡಿದ ಅವರು, ಆರ್ಥಿಕ ಸ್ವಾರ್ಥದಿಂದ ನಡೆಸಲ್ಪಡುವ ಜಾಗತಿಕ ನೀತಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಭಾರತ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಸರ್ಕಾರ ತನ್ನ ಜನರ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ ನೀಡುತ್ತದೆ ಎಂದು ರಾಷ್ಟ್ರಕ್ಕೆ ಭರವಸೆ ನೀಡಿದರು.
ಸಣ್ಣ ವ್ಯಾಪಾರಿಗಳು, ರೈತರು, ಜಾನುವಾರು ಸಾಕಣೆದಾರರು ಮತ್ತು ಸಣ್ಣ ವ್ಯಾಪಾರ ಮಾಲೀಕರೊಂದಿಗೆ ನೇರವಾಗಿ ಮಾತನಾಡಿದ ಮೋದಿ, ಯಾವುದೇ ಹಾನಿಯಾಗಲು ತಮ್ಮ ಸರ್ಕಾರ ಎಂದಿಗೂ ಅವಕಾಶ ನೀಡುವುದಿಲ್ಲ ಎಂದರು.
ಅಮೆರಿಕದ ಒತ್ತಡದ ಹೊರತಾಗಿಯೂ ಭಾರತ ಯುಕೆ, ಇಯು, ಇಎಫ್‌ಟಿಎ ಮತ್ತು ಆಸಿಯಾನ್ ದೇಶಗಳೊಂದಿಗೆ ವ್ಯಾಪಾರ ಮಾತುಕತೆಗಳನ್ನು ಮುಂದುವರಿಸುತ್ತಿದೆ ಎಂದು ಹೇಳಿದರು

