Home » ಮತ್ತೇ ಶಾಂತಿಮಂತ್ರ ಜಪಿಸಿದ ಪ್ರಧಾನಿ ಮೋದಿ
 

ಮತ್ತೇ ಶಾಂತಿಮಂತ್ರ ಜಪಿಸಿದ ಪ್ರಧಾನಿ ಮೋದಿ

by Kundapur Xpress
Spread the love

ಕಝಾನ್ : ‘ರಷ್ಯಾ ಮತ್ತು ಉಕ್ರೇನ್ ನಡುವಿನ ವೈಷಮ್ಯವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು’ ಎಂಬ ತಮ್ಮ ನಿಲುವನ್ನು ಮತ್ತೊಮ್ಮೆ ಪುನರುಚ್ಚಾರ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ಉಕ್ರೇನ್ ಬಿಕ್ಕಟ್ಟು ಇತ್ಯರ್ಥಕ್ಕೆ ಸಾಧ್ಯವಿರುವ ಎಲ್ಲಾ ನೆರವು ನೀಡಲು ಭಾರತ ಸಿದ್ದ’ ಎಂದು ಹೇಳಿದ್ದಾರೆ. ಈ ಮೂಲಕ ಮತ್ತೊಮ್ಮೆ ರಷ್ಯಾ ನೆಲದಲ್ಲೇ ಶಾಂತಿ ಮಂತ್ರ ಜಪಿಸಿದ್ದಾರೆ.

16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಮಂಗಳವಾರ ರಷ್ಯಾದ ಕಝಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ, ಈ ವೇಳೆ ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ‘ರಷ್ಯಾ – ಉಕ್ರೇನ್ ಸಂಘರ್ಷವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು, ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ನೆರವು ನೀಡಲು ಭಾರತ ಸಿದ್ದ’ ಎಂದು ಭರವಸೆ ನೀಡಿದರು

ಇದಕ್ಕೆ ಮುನ್ನ ಮಾತನಾಡಿದ ಮೋದಿ, ‘ಇಡೀ ವಲಯದಲ್ಲಿ ಆದಷ್ಟು ಶೀಘ್ರ ಶಾಂತಿ ಮರುಸ್ಥಾಪನೆಯನ್ನು ಭಾರತ ಸಂಪೂರ್ಣವಾಗಿ ಬೆಂಬಲಿಸುತ್ತದೆ. ರಷ್ಯಾ – ಉಕ್ರೇನ್ ನಡುವಿನ ಸಂಘರ್ಷ ಸಂಬಂಧ ನಾವು ನಿರಂತರ ಸಂಪರ್ಕದಲ್ಲಿದ್ದೇವೆ. ಈ ಮೊದಲೂ ಹೇಳಿದಂತೆ ಸಮಸ್ಯೆಗಳನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು ಎಂಬುದು ನಮ್ಮ ನಂಬಿಕೆ. ನಮ್ಮೆಲ್ಲಾ ಪ್ರಯತ್ನಗಳೂ ಮಾನವೀಯತೆಗೆ ಆದ್ಯತೆ ನೀಡುತ್ತವೆ. ಈ ಸಂಬಂಧ ಮುಂಬರುವ ದಿನಗಳಲ್ಲಿ ಎಲ್ಲಾ ರೀತಿಯ ಸಹಕಾರಕ್ಕೂ ಭಾರತ ಸಿದ್ದ. ಎಲ್ಲಾ ವಿಷಯಗಳನ್ನೂ ಚರ್ಚಿಸಲು ನಾವು ಅವಕಾಶ ಹೊಂದಿದ್ದೇವೆ’ ಎಂದು ಹೇಳಿದರು.

   

Related Articles

error: Content is protected !!