ವಾರಣಾಸಿ : ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು, ಅವರು ಮೂರನೇ ಬಾರಿಗೆ ಆಯ್ಕೆ ಆಗಲು ಯತ್ನ ನಡೆಸುತ್ತಿರುವ ಕಾರಣ ನಾಮಪತ್ರ ಸಲ್ಲಿಕೆ ವೇಳೆ ಭರ್ಜರಿ ಶಕ್ತಿ ಪ್ರದರ್ಶನ ನಡೆದಿದ್ದು, ಕೇಂದ್ರ ಸಚಿವರು, ಅನೇಕ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಎನ್ ಡಿ ಎ ಅಂಗಪಕ್ಷಗಳ ನಾಯಕರು ಪಾಲ್ಗೊಂಡಿದ್ದು ವಿಶೇಷವಾಗಿತ್ತು
ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಬೆಳಗ್ಗೆ ಇಲ್ಲಿನ ದಶಾಶ್ವಮೇಧ ಘಾಟ್ನಲ್ಲಿ ಮೊದಲು ಮೋದಿ ಅವರು ವೇದ ಮಂತ್ರಗಳ ಪಠಣದ ನಡುವೆ ಗಂಗಾ ಆರತಿ ಮಾಡಿದರು ಮತ್ತು ನಂತರ ನಮೋ ಫಾಟ್ಗೆ ದೋಣಿ ವಿಹಾರ ನಡೆಸಿದರು, ಅಲ್ಲಿಂದ ಕಾಲ ಭೈರವ ದೇವಾಲಯಕ್ಕೆ ಆಗಮಿಸಿದರು. ಕಾಲಭೈರವ ದೇವಾಲ ಯಕ್ಕೆ ಪ್ರಾರ್ಥನೆ ಸಲ್ಲಿಸಿದ ನಂತರ ಪ್ರಧಾನಿ ವಾರಾಣಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ನಾಮಪತ್ರ ಸಲ್ಲಿಸಿದರು.