ನವದೆಹಲಿ : ಉಕ್ರೇನ್ ಜೊತೆಗೆ ಕಳೆದ ಎರಡೂವರೆ ವರ್ಷಗಳಿಂದ ಯುದ್ಧ ನಡೆಸುತ್ತಿರುವ ನಡುವೆಯೇ ತಮ್ಮ ಮೂರನೇ ಅವಧಿಯ ಮೊದಲ ರಷ್ಯಾ ಪ್ರವಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ಸಿದ್ಧತೆ ನಡೆಸುತ್ತಿದ್ದು, ಜುಲೈ 2ನೇ ವಾರ ರಷ್ಯಾಗೆ ತೆರಳಿ ಅಧ್ಯಕ್ಷ ಪುಟಿನ್ ಅವರೊಂದಿಗೆ ವಾರ್ಷಿಕ ದ್ವಿಪಕ್ಷೀಯ ಮಾತುಕತೆ ನಡೆಸುವ ಸಾಧ್ಯತೆಯಿದೆ. ವ್ಯಾಡಿಮಿರ್ ಪುಟಿನ್ ಸಹ ಇತ್ತೀಚೆಗೆ ರಷ್ಯಾ ಅಧ್ಯಕ್ಷರಾಗಿ ಮರು ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದಿದೆ.