84
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಏ.22ರಿಂದ ಎರಡು ದಿನ ಸೌದಿ ಅರೇಬಿಯಾ ಭೇಟಿ ನೀಡಲಿದ್ದು, ಇಂಧನ, ವ್ಯಾಪಾರ ಮತ್ತು ರಕ್ಷಣೆ ಸೇರಿದಂತೆ ಹಲವು ಪ್ರಮುಖ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಮತ್ತಷ್ಟು ವಿಸ್ತರಿಸುವತ್ತ ಗಮನ ಹರಿಸಲಿದ್ದಾರೆ.
ಮೋದಿ ಸೌದಿ ಅರೇಬಿಯಾಕ್ಕೆ ನೀಡುವ ಮೂರನೇ ಭೇಟಿ ಇದಾಗಿದೆ. ಮೋದಿ ಮತ್ತು ಸೌದಿ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅಲ್ ಸೌದ್ ನಡುವಿನ ದ್ವಿಪಕ್ಷೀಯ ಮಾತುಕತೆಯ ನಂತರ ಉಭಯ ನಾಯಕರು ಹಲವು ಒಪ್ಪಂದಗಳಿಗೆ ಸಹಿ ಹಾಕಲಿದ್ದಾರೆ.
ಈ ಭೇಟಿಯು ಉಭಯ ದೇಶಗಳ ನಡುವೆ ಬಲವಾದ ಕಾರ್ಯತಂತ್ರದ ಪಾಲುದಾರಿಕೆಯನ್ನು ನಿರ್ಮಿಸಲು ಅವಕಾಶವನ್ನು ಒದಗಿಸುತ್ತದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ತ್ರಿ ತಿಳಿಸಿದ್ದಾರೆ.

