161
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ, ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದಾರೆ. ಇದು ಅಮೆರಿಕ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಆಯ್ಕೆಯಾದ ಬಳಿಕ ಉಭಯ ನಾಯಕರು ನಡೆಸಿದ ಎರಡನೇ ದೂರವಾಣಿ ಮಾತುಕತೆಯಾಗಿದೆ. ಈ ಮೊದಲು ಟ್ರಂಪ್ ಆಯ್ಕೆಯಾಗುತ್ತಲೇ ಮೋದಿ ಶುಭ ಕೋರಿದ್ದರು.
ಸೋಮವಾರದ ಮಾತುಕತೆ ಕುರಿತು ಎಕ್ಸ ಖಾತೆಯಲ್ಲಿ ಬರೆದುಕೊಂಡಿರುವ ಪ್ರಧಾನಿ ಮೋದಿ, ನನ್ನ ಆತ್ಮೀಯ ಸ್ನೇಹಿತ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಮಾತನಾಡಿರುವುದು ಖುಷಿಯಾಗಿದೆ. ನಾವು ಪರಸರ ಲಾಭದಾಯಕ ಮತ್ತು ವಿಶ್ವಾಸಾರ್ಹ ಪಾಲುದಾರಿಕೆಗೆ ಬದ್ಧರಾಗಿದ್ದೇವೆ. ನಮ್ಮ ಜನರ ಕಲ್ಯಾಣಕ್ಕಾಗಿ ಮತ್ತು ಜಾಗತಿಕ ಶಾಂತಿ, ಸಮೃದ್ಧಿ ಮತ್ತು ಭದ್ರತೆಗಾಗಿ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ’ ಎಂದಿದ್ದಾರೆ.

