137
ಹೊಸದಿಲ್ಲಿ : ವಿಶೇಷ ಬೆಳವಣಿಗೆಯೊಂದರಲ್ಲಿ ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ದಿಲ್ಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್‌ನ ಅಮೀರ್ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರನ್ನು ಬರಮಾಡಿಕೊಂಡಿದ್ದಾರೆ. ಸೋಮವಾರ ಸಂಜೆ ವಿದೇಶಾಂಗ ಸಚಿವ ಜೈಶಂಕರ್ ಅವರೊಂದಿಗೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ ಅವರು, ಕತಾರ್ ಅಮೀರ್‌ರಿಗೆ ಸ್ವಾಗತ ಕೋರಿದರು
ಈ ವೇಳೆ ಇಬ್ಬರೂ ನಾಯಕರು ಆತ್ಮೀಯ ಅಪ್ಪುಗೆಗಳನ್ನು ವಿನಿಮಯ ಮಾಡಿಕೊಂಡ ದೃಶ್ಯಗಳು ಕಂಡು ಬಂದಿವೆ. ಪ್ರಧಾನಿ ಮೋದಿ ಅವರ ಆಹ್ವಾನದ ಮೇರೆಗೆ ಎರಡು ದಿನಗಳ ಪ್ರವಾಸಕ್ಕೆ ಕತಾರ್ ಅಮೀರ್ ಭಾರತಕ್ಕೆ ಆಗಮಿಸಿದ್ದಾರೆ. ಮಂಗಳವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ ಬಳಿಕ ಮೋದಿ ಅವರೊಂದಿಗೆ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಕತಾರ್ ಅಮೀರ್ ಅವರದ್ದು ಇದು 2ನೇ ಭಾರತ ಪ್ರವಾಸ 2015ರಲ್ಲಿ ಅವರು ಆಗಮಿಸಿದ್ದರು

