Home » ಮಾತು ಹಳಿ ತಪ್ಪದಿರಲಿ : ಯೂನಸ್‌ಗೆ ಮೋದಿ ಸಲಹೆ
 

ಮಾತು ಹಳಿ ತಪ್ಪದಿರಲಿ : ಯೂನಸ್‌ಗೆ ಮೋದಿ ಸಲಹೆ

by Kundapur Xpress
Spread the love

ನವದೆಹಲಿ : ಉಭಯ ದೇಶಗಳ ನಡುವಿನ ಸಂಬಂಧ ಹದಗೆಡಿಸುವಂತಹ ಹೇಳಿಕೆಗಳನ್ನು ನೀಡಬಾರದು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನಸ್ ಅವರಿಗೆ ಎಚ್ಚರಿಸಿದ್ದಾರೆ.

ಬ್ಯಾಂಕಾಕ್‌ ನಲ್ಲಿ ನಡೆಯುತ್ತಿರುವ ಬಿಮ್ ಸ್ಟೆಕ್ ಶೃಂಗಸಭೆಯ ವೇಳೆ ಉಭಯ ನಾಯಕರು ಭೇಟಿಯಾಗಿದ್ದಾರೆ. ಈ ವೇಳೆ, ಈಶಾನ್ಯ ರಾಜ್ಯಗಳ ಕುರಿತು ಯೂನಸ್ ಚೀನಾದಲ್ಲಿ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿದ ಮೋದಿ, ‘ಗಡಿಯಲ್ಲಿ ಸ್ಥಿರತೆ ಮತ್ತು ಭದ್ರತೆ ಕಾಯ್ದುಕೊಳ್ಳಲು ಕಾನೂನನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ಅಕ್ರಮ ಗಡಿ ನುಸುಳುವಿಕೆ ತಡೆಯಬೇಕು. ದೇಶಗಳ ನಡುವೆ ಸಂಬಂಧ ಕದಡುವ ಹೇಳಿಕೆಯನ್ನು ನೀಡಬಾರದು’ ಎಂದು ಹೇಳಿದ್ದಾರೆ.

ಮೋದಿ ಹಾಗೂ ಯೂನಸ್ ನಡುವೆ ಸುಮಾರು 40 ನಿಮಿಷಗಳ ದ್ವಿಪಕ್ಷೀಯ ಮಾತುಕತೆ ನಡೆಯಿತು. ಈ ವೇಳೆ ಪ್ರಧಾನಿ ಮೋದಿ ಅವರು ಬಾಂಗ್ಲಾದಲ್ಲಿ ಹಿಂದೂಗಳು ಮೇಲಿನ ದಾಳಿ ಸೇರಿದಂತೆ ಹಲವು ವಿಚಾರದ ಬಗ್ಗೆ ಚರ್ಚೆ ನಡೆಸಿದರು. ಬಾಂಗ್ಲಾದಲ್ಲಿ ಅಲ್ಪಸಂಖ್ಯಾತರ ಮೇಲೆ ಹೆಚ್ಚುತ್ತಿರುವ ದಾಳಿ ಕುರಿತು ಕಳವಳ ವ್ಯಕ್ತಪಡಿಸಿದ ಮೋದಿ, ಆ ಕುರಿತು ತನಿಖೆ ನಡೆಸುವಂತೆಯೂ ಆಗ್ರಹಿಸಿದರು

 

Related Articles

error: Content is protected !!