Home » ದುಷ್ಟತನದ ನಾಶಕ್ಕೆ ಶಕ್ತಿ ತೋರಬೇಕು : ಮೋಹನ್‌ ಭಾಗ್ವತ್
 

ದುಷ್ಟತನದ ನಾಶಕ್ಕೆ ಶಕ್ತಿ ತೋರಬೇಕು : ಮೋಹನ್‌ ಭಾಗ್ವತ್

by Kundapur Xpress
Spread the love

ಮುಂಬೈ : ಜಮ್ಮು ಕಾಶ್ಮೀರದ ಪಹಲ್ಲಾಂ ದುರಂತದ ಪ್ರತೀಕಾರದ ಬಗ್ಗೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅಬ್ಬರಿಸಿದ ಬೆನ್ನಲ್ಲೇ ಆರ್ ಎಸ್‌ಎಸ್ ಕೂಡ ಗುಡುಗಿದ್ದು, ಭಾರತ ಪ್ರತೀಕಾರವನ್ನು ತೀರಿಸಿಕೊಳ್ಳಬೇಕು. ದುಷ್ಟತನವನ್ನು ನಾಶ ಮಾಡಲು ಶಕ್ತಿ ತೋರಬೇಕು ಎಂದು ಕರೆ ನೀಡಿದೆ.

ಮುಂಬೈನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಭಾಗಿಯಾದ ವೇಳೆ ಪಹಲ್ದಾ೦ ದಾಳಿ ಬಗ್ಗೆ ಪ್ರತಿಕ್ರಿಯಿಸಿದ ಆರ್ ಎಎಸ್ ಮುಖ್ಯಸ್ಥ ಮೋಹನ್ ಭಾಗವತ್, ಜನರ ಧರ್ಮದ  ಬಗ್ಗೆ ಕೇಳಿದ ಬಳಿಕ ಅವರನ್ನು ಸಾಯಿಸಿದ್ದಾರೆ. ಹಿಂದೂಗಳು ಎಂದಿಗೂ ಅಂತಹ ಕೃತ್ಯ ಮಾಡುವುದಿಲ್ಲ

ಇದು ಧರ್ಮ ಮತ್ತು ಅಧರ್ಮದ ನಡುವಿನ ಯುದ್ಧ. ನಮ್ಮ ಹೃದಯದಲ್ಲಿ ನೋವಿದೆ ಕೋಪಗೊಂಡಿದ್ದೇವೆ. ಆದರೆ ದುಷ್ಟತನ ನಾಶಕ್ಕೆ ಶಕ್ತಿಯನ್ನು ತೋರಿಸಬೇಕು’ ಎಂದರು.

ಇದೇ ಸಂದರ್ಭದಲ್ಲಿ ಎಲ್ಲರೂ ಒಗ್ಗಟ್ಟಾಗಿರಬೇಕು ಎಂದು ಅವರು, ‘ನಾವು ಒಗ್ಗಟ್ಟಾಗಿದ್ದರೆ ಯಾರೂ ನಮ್ಮನ್ನು ಕೆಟ್ಟ ಉದ್ದೇಶದಿಂದ ನೋಡಲು ಧೈರ್ಯ ಮಾಡುವುದಿಲ್ಲ. ದ್ವೇಷ ಮತ್ತು ಹಗೆತನ ನಮ್ಮ ಗುಣವಲ್ಲ. ಆದರೆ ಮೌನವಾಗಿ ಹಾನಿಯನ್ನು ಸಹಿಸಿಕೊಳ್ಳುವುದಿಲ್ಲ. ಶಕ್ತಿ ಇಲ್ಲದಿದ್ದರೆ ಬೇರೆ ಆಯ್ಕೆಯಿಲ್ಲ ಆದರೆ ಸಾಮರ್ಥ್ಯವಿದ್ದಾಗ ಅಗತ್ಯವಿದ್ದ ಸಂದರ್ಭದಲ್ಲಿ ಅದು ಗೋಚರಿಸಬೇಕು ಎಂದು ಹೇಳಿದರು.

 

Related Articles

error: Content is protected !!