ಶ್ರೀನಗರ : ಪಹಲ್ಲಾಮ್ ದಾಳಿ ಬಳಿಕ ಸಶಸ್ತ್ರ ಪಡೆಗಳು ಭಯೋತ್ಪಾದನಾ ನಿಗ್ರಹ ಶಿವ ಶಕ್ತಿ ಕಾರ್ಯಾಚರಣೆ ನಡೆಸಿದ್ದು, 100 ದಿನಗಳಲ್ಲಿ 12 ಮೋಸ್ಟ್ ವಾಂಟೆಡ್ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. ಹತರಾದ 12 ಉಗ್ರರಲ್ಲಿ, ಆರು ಮಂದಿ ಪಾಕಿಸ್ತಾನಿ ಭಯೋತ್ಪಾದಕರಾಗಿದ್ದರು. ಉಳಿದವರು ಜಮ್ಮು- ಕಾಶ್ಮೀರದಲ್ಲಿ ನಡೆದ ಪ್ರಮುಖ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಸ್ಥಳೀಯರಾಗಿದ್ದರು.
ಆಪರೇಷನ್ ಸಿಂದೂರ ಸೇನಾ ಕಾರ್ಯಾಚರಣೆಯಲ್ಲಿ 100ಕ್ಕೂ ಹೆಚ್ಚು ಉಗ್ರರನ್ನು ಸದೆಬಡಿಯಲಾಗಿದೆ. ಈ ಬಳಿಕ ಭಯೋತ್ಪಾದನೆ ವಿರೋಧಿ ಕಾರ್ಯಾಚರಣೆಯಲ್ಲಿ ಸೇನೆ ಹಲವು ಎನ್‌ಕೌಂಟರ್ ನಡೆಸಿದ್ದಾರೆ. ಈ ಪೈಕಿ ಮುಖ್ಯವಾಗಿ ಆಪರೇ ಷನ್ ಮಹದೇವ್ ಕಾರ್ಯಾಚರಣೆಯಲ್ಲಿ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಉಗ್ರರರನ್ನು ಹೊಡೆದುರುಳಿಸಿದೆ.
ಜುಲೈ 28ರಂದು ಶ್ರೀನಗರದ ದಾಚಿಗಾಮ್ ಪ್ರದೇಶದ ಬಳಿ ಸೇನೆ, ಸಿಆರ್‌ಪಿಎಫ್ ಮತ್ತು ಜಮ್ಮು – ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಲಷ್ಕರ್-ಎ-ತೊಯ್ದಾ (ಎಲ್‌ಇಟಿ) ಭಯೋತ್ಪಾದಕರಾದ ಸುಲೇಮಾನ್, ಅಫ್ಘಾನ್ ಮತ್ತು ಜಿಬ್ರಾನ್ ಹತರಾದರು. ಮರುದಿನವೇ, ಶಿವ ಶಕ್ತಿ ಎಂಬ ಹೆಸರಿನ ಮತ್ತೊಂದು ಕಾರ್ಯಾಚರಣೆಯನ್ನು ನಡೆಸಲಾಯಿತು, ಅಲ್ಲಿ ಸೇನೆಯು ಇನ್ನೂ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ.

