Home » 8 ದಿನ ಮುಂಚಿತವಾಗಿ ಎಂಟ್ರಿಕೊಟ್ಟ ಮುಂಗಾರು ಮಳೆ
 

8 ದಿನ ಮುಂಚಿತವಾಗಿ ಎಂಟ್ರಿಕೊಟ್ಟ ಮುಂಗಾರು ಮಳೆ

by Kundapur Xpress
Spread the love

ತಿರುವನಂತಪುರಂ : ಭಾರತದ ಕೃಷಿ ಚಟುವಟಿಕೆಗಳಿಗೆ ಜೀವ ತುಂಬುವ ನೈಋತ್ಯ ಮುಂಗಾರು ಶನಿವಾರ ದಕ್ಷಿಣ ರಾಜ್ಯವಾದ ಕೇರಳದ ಮೂಲಕ ದೇಶವನ್ನು ಪ್ರವೇಶಿಸಿದೆ.

ಸಾಮಾನ್ಯವಾಗಿ ಜೂ.1ರಂದು ಕೇರಳ ಪ್ರವೇಶಿಸಿ ಜುಲೈ 8ರ ಹೊತ್ತಿಗೆ ಇಡೀ ದೇಶಕ್ಕೆ ಆವರಿಸುತ್ತಿತ್ತು. ಬಳಿಕ ಸೆ.17ಕ್ಕೆ ವಾಯುವ್ಯರ ಕಡೆಯಿಂದ ನಿರ್ಗಮಿಸಲು ಶುರುವಾಗಿ ಅ.15ರ ಹೊತ್ತಿಗೆ ಮಾನ್ಸೂನ್ ಅಂತ್ಯವಾಗುತ್ತಿತ್ತು. ಆದರೆ ಈ ಸಲ 8 ದಿನಗಳ ಮೊದಲೇ ಆರಂಭವಾಗಿದೆ

2009ರಲ್ಲಿ ಮೇ 23ರಂದು ಮಾನ್ಸೂನ್ ಪ್ರವೇಶವಾಗಿತ್ತು. ಅಂದರೆ 16 ವರ್ಷದಲ್ಲಿ ಮಾನ್ಸೂನ್ ಇಷ್ಟು ಬೇಗ ಆಗಮಿಸಿದ್ದು ಇದೇ ಮೊದಲು.

ಮುಂಗಾರು ಪ್ರವೇಶ ಕೊಂಚ ಬೇಗವಾಗಿದೆಯಾದರೂ ದೇಶದ ವಿವಿಧ ಭಾಗಗಳಲ್ಲಿ ಮಳೆಯ ಮೇಲೆ ಜಾಗತಿಕ, ಪ್ರಾದೇಶಿಕ ಮತ್ತು ಸ್ಥಳೀಯ ಅಂಶಗಳು ಪರಿಣಾಮ ಬೀರುತ್ತವೆ ಎಂದು ಹವಾಮಾನ ಇಲಾಖೆ ತಿಳಿಸಿದೆ

 

Related Articles

error: Content is protected !!