ಹೊಸದಿಲ್ಲಿ : ಐಪಿಎಸ್ ಹಿರಿಯ ಅಧಿಕಾರಿ ಬಿ. ಶ್ರೀನಿವಾಸನ್ ಅವರನ್ನು ರಾಷ್ಟ್ರೀಯ ಭದ್ರತಾ ಪಡೆಯ (ಎನ್ಎಸ್ಜಿ) ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಬಿ. ಶ್ರೀನಿವಾಸನ್ ಅವರು ಬಿಹಾರ ಕೇಡರ್ನ 1992ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದಾರೆ. ಶ್ರೀನಿವಾಸನ್ ಅವರನ್ನು ಎನ್ ಎಸ್ಜಿ ಮಹಾ ನಿರ್ದೇಶಕರನ್ನಾಗಿ ನೇಮಿಸಲು ಕೇಂದ್ರ ಸಚಿವ ಸಂಪುಟದ ನೇಮಕಾತಿ ಸಮಿತಿಯು ಅನುಮೋದನೆ ನೀಡಿದೆ. ಅವರ ಅಧಿಕಾರ ಅವಧಿಯು 2027ರ ಆ.31ರ ವರೆಗೆ ಇರಲಿದೆ ಎಂದು ಸಿಬ್ಬಂದಿ ಸಚಿವಾಲಯದ ಆದೇಶದಲ್ಲಿ ತಿಳಿಸಿದೆ. ಜಮ್ಮು ಮತ್ತು ಕಾಶ್ಮೀರದ ವಿಶೇಷ ಮಹಾನಿರ್ದೇಶಕರಾಗಿ ನಿಯೋಜಿಸಲಾದ ನಲಿನ್ ಪ್ರಭಾತ್ ನಿರ್ಗಮನದ ಬಳಿಕ ಎನ್ಎಸ್ಜಿ ಮಹಾ ನಿರ್ದೇಶಕರನ್ನಾಗಿ ಶ್ರೀನಿವಾಸನ್ ಅವರನ್ನು ನೇಮಕ ಮಾಡಲಾಗಿದೆ.