90
ಸುಷ್ಮಾ: ಛತ್ತೀಸಗಢದ ಸುಕ್ಕಾ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್ ನಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಿಸ್ತಾರಾಮ್ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಜಿಲ್ಲಾ ಮೀಸಲು ಪೊಲೀಸ್ ಪಡೆ (ಡಿಆರ್‌ಜಿ) ಮತ್ತು ಕೋಬ್ರಾ ಬೆಟಾಲಿಯನ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಎನ್‌ಕೌಂಟರ್‌ಸ್ಥ ಳದಿಂದ ಇಬ್ಬರು ನಕ್ಸಲರ ಶವಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಶೋಧ ಕಾರ್ಯಾ ಚರಣೆ ಮುಂದುವರಿದಿದೆ. ಈ ಎನೌಂಟರ್ ನೊಂದಿಗೆ, ಈ ವರ್ಷ ರಾಜ್ಯದಲ್ಲಿ ಒಟ್ಟು 83 ನಕ್ಸಲರು ಹತರಾದಂತಾಗಿದೆ.

