ಛತ್ತೀಸಗಢ : ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಗಳು ಹೋಗುತ್ತಿದ್ದ ವಾಹನವನ್ನು 70 ಕೇಜಿ ತೂಕದ ಸುಧಾರಿತ ಸ್ಪೋಟಕಗಳಿದ್ದ ನೆಲಬಾಂಬ್ ಬಳಸಿ ನಕ್ಸಲೀಯರು ಸ್ಫೋಟಿಸಿದ್ದಾರೆ. ಘಟನೆಯಲ್ಲಿ8 ಮಂದಿ ಜಿಲ್ಲಾ ರಿಸರ್ವ್ ಗಾರ್ಡ್‌ನ ಸಿಬ್ಬಂದಿ ಮತ್ತು ಒಬ್ಬ ಚಾಲಕ ಸೇರಿ 9 ಮಂದಿ ಸಾವನ್ನಪ್ಪಿದ್ದಾರೆ. ಅಂಬೇಲಿ ಗ್ರಾಮದ ಬಳಿ ಘಟನೆ ನಡೆದಿದೆ.
ಜಿಲ್ಲಾ ರಿಸರ್ವ್ ಗಾರ್ಡ್ ಸಿಬ್ಬಂದಿ ದಂತೇವಾಡ, ನಾರಾಯ ಣ್‌ಪುರ ಮತ್ತು ಬಿಜಾಪುರ ಪ್ರದೇಶದಲ್ಲಿ ನಕ್ಸಲೀಯರ ವಿರುದ್ಧ ಜಂಟಿ ಕಾರ್ಯಾಚರಣೆ ನಡೆಸಿ ಸ್ಕಾರ್ಪಿಯೋ ವಾಹನದಲ್ಲಿ ಹಿಂತಿರುಗುತ್ತಿದ್ದರು. ಆಗ ಈ ಘಟನೆ ನಡೆದಿದೆ. ಭಾನುವಾರವಷ್ಟೇ ಬಸ್ತರ್ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯು ನಾಲ್ವರು ಮಾವೋವಾದಿಗಳನ್ನು ಎನ್‌ಕೌಂಟರ್ ಮಾಡಿದ್ದರು. ಅದರ ಬೆನ್ನಲ್ಲೇ ಮಾವೋವಾದಿಗಳು ಭೀಕರ ದಾಳಿ ನಡೆಸಿದ್ದಾರೆ
ರಾಷ್ಟ್ರಪತಿ ಖಂಡನೆ, ಶಾ ಗುಡುಗು :
ನಕ್ಸಲರ ಕೃತ್ಯವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಖಂಡಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಖಂಡಿಸಿದ್ದು, ಸಾವನ್ನು ನಾವು ವ್ಯರ್ಥ ವಾಗಲು ಬಿಡುವುದಿಲ್ಲ. 2026ರ ಮಾರ್ಚ್ ಅಂತ್ಯದೊಳಗೆ ದೇಶದಲ್ಲಿ ನಕ್ಸಲಿಸಂ ಅಂತ್ಯಗೊಳಿಸುತ್ತೇವೆ ಎಂದು ಟ್ವಿಟ್ ಮಾಡಿದ್ದಾರೆ.