ಹೊಸದಿಲ್ಲಿ : ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಬಿಹಾರದ ನೂತನ ರಾಜ್ಯಪಾಲರನ್ನಾಗಿ ನಿಯುಕ್ತಿಗೊಳಿಸಲಾಗಿದ್ದು, ಅಲ್ಲಿದ್ದ ರಾಜೇಂದ್ರ ವಿಶ್ವನಾಥ್ ಅರ್ಲೆಕರ್ ಅವರನ್ನು ಕೇರಳದ ನೂತನ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ.
ಮಂಗಳವಾರ ರಾತ್ರಿ ರಾಷ್ಟ್ರಪತಿ ಬ್ರೌಪದಿ ಮುರ್ಮು ಅವರು ರಾಜ್ಯಪಾಲರ ಬದಲಾವಣೆ ಸೇರಿದಂತೆ ಕೆಲವು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕವನ್ನೂ ಮಾಡಿದ್ದಾರೆ. ಮಣಿಪುರಕ್ಕೆ ನಿವೃತ್ತ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರನ್ನು ನೇಮಿಸಲಾಗಿದೆ. ಹಾಗೆಯೇ ನಿವೃತ್ತ ಸೇನಾ ಮುಖ್ಯಸ್ಥ ವಿಜಯ್ ಕುಮಾರ್ ಸಿಂಗ್ ಅವರನ್ನು ಮಿಜೋರಾಂನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಹಾಗೆಯೇ ಒಡಿಶಾದ ರಾಜ್ಯಪಾಲರಾಗಿದ್ದ ರಘುಬರ್ ದಾಸ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಸ್ವೀಕಾರ ಮಾಡಿದ್ದು ಇಲ್ಲಿಗೆ ಮಿಜೋರಾಂನಲ್ಲಿದ್ದ ಹರಿಬಾಬು ಕಂಬಂಪತಿ ಅವರನ್ನು ನೇಮಕ ಮಾಡಲಾಗಿದೆ.