ವಾರಾಣಸಿ : ಸತತ ಮೂರನೇ ಬಾರಿಗೆ ಪ್ರಧಾನಿ ಹುದ್ದೆಗೆ ಏರುವ ನಿರೀಕ್ಷೆಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಉತ್ತರಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಳೆ ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ. ಹಿಂದಿನ ಎರಡು ಚುನಾವಣೆ ಯಲ್ಲೂ ಮೋದಿ ಇದೇ ಕ್ಷೇತ್ರದಿಂದಲೇ ಲೋಕಸಭೆಗೆ ಆಯ್ಕೆಯಾಗಿದ್ದರು. ಇತ್ತೀಚೆಗೆ ಅಯೋಧ್ಯೆ ರಾಮಮಂದಿರದಲ್ಲಿ ನಡೆದ ಬಾಲಕ ರಾಮನ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದ ಗಣೇಶ್ವರ ಶಾಸ್ತ್ರಿಗಳು ಪ್ರಧಾನಿ ನರೇಂದ್ರ ಮೋದಿ ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಲಿದ್ದಾರೆ ಎನ್ನಲಾಗಿದೆ. ಇವರ ಜೊತೆಗೆ ಪಶ್ಚಿಮ ಬಂಗಾಳದ ಖ್ಯಾತ ಕಲಾವಿದೆ, ಪದ್ಮಶ್ರೀ ಪುರಸ್ಕೃತ ಸೊಮಾ ಘೋಷ್ ಅವರು ಮತ್ತೊಬ್ಬ ಸೂಚಕರಾಗಲಿದ್ದಾರೆ ಎನ್ನಲಾಗಿದೆ