ವಯನಾಡ್ : ಕೇರಳದ ಪ್ರಸಿದ್ಧ ಪ್ರವಾಸಿ ಜಿಲ್ಲೆಯಾಗಿರುವ ವಯನಾಡಿನಲ್ಲಿ ಮುಂಬರುವ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬುಧವಾರ ಭರ್ಜರಿ ರೋಡ್ಶೋ ನಡೆಸಿದ ಬಳಿಕ ನಾಮಪತ್ರ ಸಲ್ಲಿಸಿದರು. ತನ್ಮೂಲಕ ಗಾಂಧಿ ಕುಟುಂಬದ ಇನ್ನೊಂದು ಕುಡಿ ಅಧಿಕೃತವಾಗಿ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿದರು
ತಾಯಿ ಸೋನಿಯಾ ಗಾಂಧಿ, ಸೋದರ ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾ ರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ನ ಖ್ಯಾತನಾಮರು ಪ್ರಿಯಾಂಕಾಗೆ ಸಾಥ್ ನೀಡಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಯನಾಡ್ ಹಾಗೂ ರಾಯ್ ಬರೇಲಿ, ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಗೆದ್ದಿದ್ದರು. ಬಳಿಕ ಅವರು ವಯನಾಡ್ ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದರಿಂದ ನ.13 ರಂದು ಅಲ್ಲಿಗೆ ಉಪಚುನಾವಣೆ ನಡೆಯುತ್ತಿದೆ.