106
ನವದೆಹಲಿ : ಯೆಮೆನ್ ಪ್ರಜೆಗೆ ಪ್ರಜ್ಞೆ ತಪ್ಪುವ ಚುಚ್ಚುಮದ್ದು ನೀಡಿ ಆತನ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷ ಪ್ರಿಯಾರನ್ನು ಉಳಿಸಿಕೊಳ್ಳಲು ಸರ್ಕಾರ ಎಲ್ಲಾ ಪ್ರಯತ್ನ ನಡೆಸುತ್ತಿರುವುದಾಗಿ ಭಾರತ ಪುನರುಚ್ಚರಿಸಿದೆ.
ಈ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಗುರುವಾರ ಪ್ರತಿಕ್ರಿಯೆ ನೀಡಿದ್ದು, ಯಮೆನ್‌ನ ಸ್ಥಳೀಯ ಆಡಳಿತ ಹಾಗೂ ಇತರ ಆಪ್ತದೇಶಗಳ ಜೊತೆ ಸಂಪರ್ಕದಲ್ಲಿದ್ದೇವೆ. ಸಾಧ್ಯವಿರುವ ಎಲ್ಲ ಪರಿಹಾರ ಮಾರ್ಗಗಳನ್ನೂ ಹುಡುಕುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಸರ್ಕಾರ ಈ ಪ್ರಕರಣದಲ್ಲಿ ಸಾಧ್ಯವಿರುವ ಎಲ್ಲ ಸಹಾಯ ನೀಡುತ್ತಿದೆ.ನಿಮಿಷಾಳ ಕುಟುಂಬಕ್ಕೆ ವಕೀಲರನ್ನು ನೇಮಿಸಿದ್ದೇವೆ. ಸಮಸ್ಯೆಯನ್ನು ಪರಿಹರಿಸಲು ಸ್ಥಳೀಯ ಅಧಿಕಾರಿಗಳು ಮತ್ತು ಇತರ ಆಪ್ತ ದೇಶಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ತಿಳಿಸಿದ್ದಾರೆ. ಜು.16ರಂದು ನಡೆಯಬೇಕಿದ್ದ ಗಲ್ಲು ಶಿಕ್ಷೆ ಜಾರಿ ಮುಂದೂಡಲಾಗಿತ್ತು.

