161
ಹೊಸದಿಲ್ಲಿ : ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸುವುದು ಮತ್ತು 370 ನೇ ವಿಧಿಯನ್ನು ರದ್ದುಪಡಿಸುವಂತಹ ಸುಪ್ರೀಂಕೋರ್ಟ್ ಹೆಗ್ಗುರುತು ತೀರ್ಪುಗಳ ಭಾಗವಾಗಿದ್ದ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಸೋಮವಾರ ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ಬ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಲಿದ್ದಾರೆ. ನ್ಯಾಯಮೂರ್ತಿ ಖನ್ನಾ ಅವರು ಭಾನುವಾರ ನಿವೃತ್ತರಾದ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ಉತ್ತರಾಧಿಕಾರಿಯಾಗಲಿದ್ದು ಅವರ ಅಧಿಕಾರಾವಧಿ 2025ರ ಮೇ 13 ರವರೆಗೆ ಇರುತ್ತದೆ.

