ನವದೆಹಲಿ : ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ಗ್ಯಾರಂಟಿ ಯೋಜನೆಯನ್ನು ಮಾರ್ಪಾಡು ಮಾಡುವ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿದ ಹೇಳಿಕೆ ಹಾಗೂ ಇದಾದ ನಂತರ ‘ಆರ್ಥಿಕವಾಗಿ ಈಡೇರಿಸಬಹುದಾದ ಭರವಸೆಗಳನ್ನು ಮಾತ್ರ ನೀಡಬೇಕು’ ఎంబ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆಗಳನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ
‘ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳನ್ನು ಹಿಂಪಡೆಯಲು ಹೊರಟಿದೆ ಚುನಾವಣೆ ಸಮಯದಲ್ಲಿ ಜನರಿಗೆ ಉಚಿತ ಗ್ಯಾರಂಟಿ ಭರವಸೆಗಳನ್ನು ನೀಡಿದ್ದ ಕಾಂಗ್ರೆಸ್ ಬಣ್ಣ ಈಗ ಜನರ ಮುಂದೆ ಬಯಲಾಗಿದೆ’ ಎಂದು ಪ್ರಹಾರ ಮಾಡಿದ್ದಾರೆ
ಶುಕ್ರವಾರ ಸಂಜೆ ಸರಣಿ ಟ್ವಿಟ್ ಮಾಡಿರುವ ಮೋದಿ, ‘ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಆಂತರಿಕ ಸಂಘರ್ಷದಲ್ಲಿ ರಾಜಕೀಯ ನಿರತವಾಗಿದೆ. ಅಭಿವೃದ್ಧಿಯ ಬಗ್ಗೆ ಕಾಳಜಿ ವಹಿಸುವ ಬದಲು ಲೂಟಿ ಮಾಡುತ್ತಿದೆ. ಅಷ್ಟೇ ಅಲ್ಲ, ಈಗಿರುವ ಸ್ತ್ರೀಮುಗಳನ್ನು ಹಿಂಪಡೆಯಲು ಕೂಡ ಹೊರಟಿದೆ’ ಎಂದು ಡಿಕೆಶಿ ನೀಡಿದ ‘ಶಕ್ತಿ ಯೋಜನೆ ಪರಿಷ್ಕರಣೆ’ ಹೇಳಿಕೆಯನ್ನು ಪರೋಕ್ಷವಾಗಿ ಉಲ್ಲೇಖಿಸಿ ಟೀಕಿಸಿದ್ದಾರೆ.
ಇದೇ ವೇಳೆ, ‘ಹಿಮಾಚಲ ಪ್ರದೇಶದಲ್ಲಿ ಸರ್ಕಾರಿ ನೌಕರರಿಗೆ ಸರಿಯಾದ ಸಮಯಕ್ಕೆ ಸಂಬಳ ಸಿಗುತ್ತಿಲ್ಲ. ತೆಲಂಗಾಣದಲ್ಲಿ ರೈತರು ಮನ್ನಾ ಭರವಸೆ ಈಡೇರಿಕೆಗೆ ಕಾಯುತ್ತಿದ್ದಾರೆ. ಈ ಹಿಂದೆ, ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಅವರು ಕೆಲವು ಭರವಸೆ ನೀಡಿದ್ದರು, ಅದು ಐದು ವರ್ಷಗಳವರೆಗೆ ಜಾರಿಯಾಗಲಿಲ್ಲ. ಕಾಂಗ್ರೆಸ್ ಹೇಗೆ ಕೆಲಸ ಮಾಡುತ್ತದೆ ಎಂಬುದಕ್ಕೆ ಇಂಥ ಹಲವಾರು ಉದಾಹರಣೆಗಳಿವೆ’ ಎಂದು ಪ್ರಧಾನಿ ಕಾಂಗ್ರೇಸನ್ನು ಕುಟುಕಿದರು