ಮುಂಬೈ: ಭಾರತದ ಗುರಿ ಅಭಿವೃದ್ಧಿಯೇ ಹೊರತು ವಿಸ್ತಾರವಾದ ಅಲ್ಲ. ಭಾರತ ಯಾವತ್ತಿಗೂ ಮುಕ್ತ, ಸುರಕ್ಷಿತ ಮತ್ತು ಎಲ್ಲರನ್ನೂ ಒಳಗೊಂಡ ಸಮೃದ್ಧತೆಯನ್ನು ಇಂಡೋ-ಪೆಸಿಫಿಕ್ ಸಾಗರ ಪ್ರದೇಶದಲ್ಲಿ ಬಯಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಈ ಮೂಲಕ ಬಲಿಷ್ಠ ನೌಕಾಪಡೆಯೊಂದಿಗೆ ದಕ್ಷಿಣ ಚೀನಾ ಸಮುದ್ರದಲ್ಲಿ ಅಧಿಪತ್ಯ ಸಾಧಿಸಿ ನೆರೆಯ ದೇಶಗಳಿಗೆ ಬೆದರಿಕೆಯೊಡ್ಡುವ ಚೀನಾಗೆ ಸಂದೇಶ ರವಾನಿಸಿದ್ದಾರೆ
ಮುಂಬೈನಲ್ಲಿ ಬುಧವಾರ ಇದೇ ಮೊದಲ ಬಾರಿಗೆ ದೇಶೀ ನಿರ್ಮಿತ ಐಎನ್ ಎಸ್ ಸೂರತ್, ಐಎನ್‌ಎಸ್ ನೀಲಗಿರಿ ಯುದ್ಧನೌಕೆ ಮತ್ತು ಐಎನ್ಎಸ್ ವಗ್ ಶೀರ್ ಜಲಾಂತಾರ್ಗಾಮಿಯನ್ನು ಲೋಕಾ ರ್ಪಣೆ ಮಾಡಿ ಮಾತನಾಡಿದರು ಸಮುದ್ರವನ್ನು ಮಾದಕವಸ್ತು, ಶಸ್ತ್ರಾಸ್ತ್ರ ಗಳು ಮತ್ತು ಭಯೋತ್ಪಾದಕರಿಂದ ಮುಕ್ತವಾಗಿಸಲು ಮತ್ತು ಸುರಕ್ಷಿತ ಹಾಗೂ ಸಮೃದ್ಧಗೊಳಿಸಲು ನಾವು ಅಂತಾರಾಷ್ಟ್ರೀ ಯಮಟ್ಟದಲ್ಲಿ ಪಾಲುದಾರರರಾಗಬೇಕು. ಇದೀಗ ಭಾರತವು ಪ್ರಮುಖ ನೌಕಾಶಕ್ತಿಯಾಗಿ ಬೆಳೆಯುತ್ತಿದ್ದು, ವಿಶ್ವದ ವಿಶ್ವಾಸಾರ್ಹ ಮತ್ತು ಜವಾಬ್ದಾರಿಯುತ ಪಾಲುದಾರನಾಗಿ ಗುರುತಿಸಲ್ಪಡುತ್ತಿದೆ ಎಂದರು.