Home » ಭಾರತ ಇಂದು ಪ್ರಪಂಚದ ಕಾರ್ಖಾನೆ
 

ಭಾರತ ಇಂದು ಪ್ರಪಂಚದ ಕಾರ್ಖಾನೆ

by Kundapur Xpress
Spread the love

ನವದೆಹಲಿ : ಭಾರತವು ಇಂದು ಉತ್ಪಾದನಾ ಕೇಂದ್ರವಾಗಿ ಹೊರ ಹೊಮ್ಮುತ್ತಿದ್ದು ಇಡೀ ವಿಶ್ವಕ್ಕೇ ಕಾರ್ಖಾನೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹರ್ಷಿಸಿದ್ದಾರೆ.

ಎನ್‌.ಎಕ್ಸ್‌ಟಿ ಸಮಾವೇಶದಲ್ಲಿ ನ್ಯೂಸ್‌ಎಕ್ಸ್ ವರ್ಲ್ಡ್ ವಾಹಿನಿ ಉದ್ಘಾಟಿಸಿ ಮಾತನಾಡಿದ ಮೋದಿ, ‘ಸ್ಥಳೀಯವಾಗಿ ಉತ್ಪಾದಿ ಸುವ ಉತ್ಪನ್ನಗಳನ್ನು ಉತ್ತೇಜಿಸಲು ಶುರು ಮಾಡಿದ ವೋಕಲ್ ಫಾರ್ ಲೋಕಲ್ ಮತ್ತು ಲೋಕಲ್ ಫಾರ್ ಗ್ಲೋಬಲ್ ಅಭಿಯಾನ’ ಫಲ ಕೊಡುತ್ತಿದೆ. ನಾವಿಂದು ಕೇವಲ ಕಾರ್ಮಿಕ ವರ್ಗವಾಗಿ ಉಳಿದಿಲ್ಲ ಭಾರತವು ಆಸಂಖ್ಯ ನಾವೀನ್ಯತೆ ಹಾಗೂ ಪರಿಹಾರಗಳನ್ನು ಹುಡುಕಿ ಅವನ್ನು ವಿಶ್ವಕ್ಕೆ ನೀಡುತ್ತಿದೆ. ಇಲ್ಲಿನ ಉತ್ಪನ್ನಗಳು ಜಾಗತಿಕ ಮಟ್ಟದಲ್ಲಿ ಮಾರಾಟವಾಗುತ್ತಿವೆ’ ಎಂದು ದೇಶದ ಉತ್ಪಾದನಾ ಕ್ಷೇತ್ರವನ್ನು ಕೊಂಡಾಡಿದರು. ಜಗತ್ತಿಗೆ ಸುರಕ್ಷಿತ ಹಾಗೂ ಕೈಗೆಟುಕುವ ಡಿಜಿಟಲ್ ಪಾವತಿ ವ್ಯವಸ್ಥೆಯ ಅಗತ್ಯವಿದ್ದಾಗ ಭಾರತ ಯುಪಿಐ ಅಭಿವೃದ್ಧಿಪಡಿಸಿದ್ದು ಅದನ್ನಿಂದು ಫ್ರಾನ್ಸ್ ಯುಎಇ, ಸಿಂಗಾಪುರದಂತಹ ದೇಶಗಳು ಬಳಸುತ್ತಿರುವುದು, ಕೊರೋನಾ ಸಮಯದಲ್ಲಿ ಲಸಿಕೆ ಒದಗಿಸಿದ್ದನ್ನು ಪ್ರಧಾನಿ ಮೋದಿ ಸ್ಮರಿಸಿದರು.

 

Related Articles

error: Content is protected !!