Categories
ರಾಷ್ಟ್ರೀಯ ಸುದ್ದಿ

ಮುಸ್ಲಿಮರಿಗೆ ಅಧ್ಯಕ್ಷ ಪಟ್ಟ ನೀಡಿ : ಮೋದಿ ಸವಾಲು

ಹಿಸಾರ್  (ಹರ್ಯಾಣ) : ಕಾಂಗ್ರೆಸ್‌ನ ಓಲೈಕೆ ರಾಜಕಾರಣಕ್ಕೆ ಬಲಿಯಾದವರು ಮುಸ್ಲಿಂ ಸಮುದಾಯದವರು. ಕಾಂಗ್ರೆಸ್ ಪಕ್ಷಕ್ಕೆ ನಿಜವಾಗಿಯೂ ಮುಸ್ಲಿಮರ ಕುರಿತು ಸಹಾನುಭೂತಿ ಇದ್ದರೆ ಅದೇ ಸಮುದಾಯದವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲಿ ಅಂತೆಯೇ, ಶೇ.50ರಷ್ಟು ಟಿಕೆಟ್ ಕೊಡಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಪಕ್ಷಕ್ಕೆ ಸವಾಲೆಸೆದಿದ್ದಾರೆ.

ಇಲ್ಲಿನ ಮಹಾರಾಜ ಅಗ್ರಸೇನ ವಿಮಾನ ನಿಲ್ದಾಣದಿಂದ ಅಯೋಧ್ಯೆಗೆ ಮೊದಲ ವಾಣಿಜ್ಯ ವಿಮಾನ ಹಾರಾಟಕ್ಕೆ ಚಾಲನೆ ನೀಡಿ, ಹೊಸ ಟರ್ಮಿನಲ್‌ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮೋದಿ ಮಾತನಾಡಿದರು.

ಈ ವೇಳೆ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ಮಾಡಿರುವ ಅವರು, ಕಾಂಗ್ರೆಸ್ ಎಸ್ಸಿ, ಎಸ್ಟಿ, ಒಬಿಸಿ ಸಮುದಾಯದವರನ್ನು ದ್ವಿತೀಯ ದರ್ಜೆ ನಾಗರಿಕರನ್ನಾಗಿಸಿದೆ. ಅಂತೆಯೇ, ಅಂಬೇಡ್ಕರ್ ಅವರ ಸಂವಿಧಾನವನ್ನು ಕಾಂಗ್ರೆಸ್‌ ನಾಶಪಡಿಸಿದ್ದು, ಅದನ್ನು ಅಧಿಕಾರಕ್ಕೇರುವ ಸಾಧನವಾಗಿ ಬಳಸುತ್ತಿದೆ. ಓಲೈಕೆ ರಾಜಕಾರಣದ ಭಾಗವಾಗಿ 2013ರಲ್ಲಿ ವಕ್ಸ್ ಕಾಯ್ದೆಗೆ ತಿದ್ದುಪಡಿ ಮಾಡಲಾಯಿತು’ ಎಂದು ಆರೋಪಿಸಿದ್ದಾರೆ