123
ನವದೆಹಲಿ : ಜಮ್ಮು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲಿನ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರವಾಗಿ ಖಂಡಿಸಿದ್ದಾರೆ. ಕೃತ್ಯದಲ್ಲಿ ತೊಡಗಿರುವ ಉಗ್ರರನ್ನು ಎಂದಿಗೂ ಬಿಡುವುದಿಲ್ಲ ಎಂದು ಗುಡುಗಿದ್ದಾರೆ. ಇದಲ್ಲದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜತೆ ಮಾತಣಾಡಿ ಘಟನೆಯ ವಿವರ ಪಡೆದಿರುವ ಅವರು ಘಟನಾ ಸ್ಥಳದಲ್ಲಿ ಶಾಂತಿ ಮರುಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ತಮ್ಮ ಟ್ವಿಟರ್ ಖಾತೆಯಲ್ಲಿ ಎಚ್ಚರಿಕೆ ನೀಡಿರುವ ಪ್ರಧಾನಿ, ಉಗ್ರರನ್ನು ಬಿಡಲಾಗುವುದಿಲ್ಲ. ಅವರ ಕೆಟ್ಟ ಉದ್ದೇಶ ಎಂದಿಗೂ ಫಲಕೊಡುವುದಿಲ್ಲ. ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ಅಚಲವಾಗಿದ್ದು, ಅದು ಇನ್ನಷ್ಟು ಬಲಗೊಳ್ಳುತ್ತದೆ. ದುರ್ಘಟನೆಯಲ್ಲಿ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಸಂದೇಶ ಕಳುಹಿಸಿದ್ದಾರೆ. ಜೊತೆಗೆ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ.

