ಇಸ್ಲಾಮಾಬಾದ್ : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಬೆಲೆಯೇರಿಕೆ, ವಿದ್ಯುತ್ ಹಾಗೂ ವಿವಿಧ ಸಮಸ್ಯೆಗಳ ವಿರುದ್ದ ಸಿಡಿದೆದ್ದು ಜನತೆ ನಡೆಸುತ್ತಿರುವ ಹಿಂಸಾತ್ಮಕ ಹೋರಾಟ 3ನೇ ದಿನಕ್ಕೆ ಕಾಲಿಟ್ಟಿದೆ. ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವಿನ ಭಾರಿ ಘರ್ಷಣೆಯಲ್ಲಿ ಒಬ್ಬ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದಾರೆ ಮತ್ತು ಪೊಲೀಸರು ಸೇರಿ 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮುಜಾಫರಾಬಾದ್, ರಾವಲ್ಕೋಟ್ನಲ್ಲಿ ಸ್ಥಳೀಯರು ಭದ್ರತಾ ಪಡೆಗಳ ನಡುವೆ ಘರ್ಷ ಣೆಗೆ ಇಳಿದಿದ್ದು, ಭಾರತದೊಂದಿಗೆ ವಿಲೀನಕ್ಕೆ ಒತ್ತಾಯಿಸುವ ಪೋಸ್ಟರ್ಗಳನ್ನು ಹಾಕಿದ್ದಾರೆ. ‘ಇದು ಪಾಕ್ ಸರ್ಕಾರವು ಆಕ್ರಮಿತ ಕಾಶ್ಮೀರದ ಮೇಲೆ ಹಿಡಿತ ಕಳೆದುಕೊಳ್ಳುತ್ತಿರುವ ದ್ಯೋತಕ’ ಎಂದು ಕೆಲವು ಪಾಕ್ ಅಧಿಕಾರಿಗಳೇ ಹೇಳಿದ್ದಾರೆಂದು ಮಾಧ್ಯಮಗಳು ವರದಿ ಮಾಡಿವೆ.