Home » ಪಾಕಿಸ್ತಾನದ ಮೇಲೆ ಭಾರತದ ದಾಳಿ ಖಚಿತ
 

ಪಾಕಿಸ್ತಾನದ ಮೇಲೆ ಭಾರತದ ದಾಳಿ ಖಚಿತ

ಪಾಕ್‌ ರಕ್ಷಣಾ ಸಚಿವ

by Kundapur Xpress
Spread the love

ಇಸ್ಲಾಮಾಬಾದ್ : 26 ಜನರನ್ನು ಬಲಿ ಪಡೆದ ಪಹಲ್ದಾಂ ನರಮೇಧದ ಘಟನೆಗೆ ಪ್ರತೀಕಾರವಾಗಿ ಪಾಕಿಸ್ತಾನದ ಮೇಲೆ ಭಾರತದ ದಾಳಿ ಖಚಿತ ಎಂದು ಸ್ವತಃ ಪಾಕಿಸ್ತಾನದ ರಕ್ಷಣಾ ಸಚಿವ ಸ್ವಾಜಾ ಆಸೀಫ್ ಹೇಳಿದ್ದಾರೆ.

ಘಟನೆ ಬೆನ್ನಲ್ಲೇ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಆಸೀಫ್ ‘ಇತ್ತೀಚಿನ ಕೆಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪಾಕಿಸ್ತಾನದ ಮೇಲೆ ಭಾರತದ ದಾಳಿ ಖಚಿತ ಎಂದು ಸೇನೆ ಸರ್ಕಾರಕ್ಕೆ ಮಾಹಿತಿ ನೀಡಿದೆ. ಹೀಗಾಗಿ ಗಡಿಯಲ್ಲಿ ನಮ್ಮ ಪಡೆ ಬಲಪಡಿಸಿದ್ದೇವೆ. ಈ ಪರಿಸ್ಥಿತಿಯಲ್ಲಿ ಕೆಲವು ಕಾರ್ಯತಂತ್ರದ ನಿರ್ಣಯ ಕೈಗೊಳ್ಳಲಾಗಿದೆ. ಭಾರತದಿಂದ ನಮ್ಮ ಅಸ್ತಿತ್ವಕ್ಕೆ ಧಕ್ಕೆ ಬಂದರೆ ಪರಮಾಣು ದಾಳಿಗೂ ಸಿದ್ಧರಿದ್ದೇವೆ’ ಎಂದು ಹೇಳಿದ್ದಾರೆ.

 

Related Articles

error: Content is protected !!