Home » ಪಾಕ್‌ ಶೆಲ್‌ ದಾಳಿ : 3ಬಲಿ 6ಮಂದಿಗೆ ಗಾಯ
 

ಪಾಕ್‌ ಶೆಲ್‌ ದಾಳಿ : 3ಬಲಿ 6ಮಂದಿಗೆ ಗಾಯ

by Kundapur Xpress
Spread the love

ನವದೆಹಲಿ : ಭಾರತದ ಮೇಲಿನ ಕ್ಷಿಪಣಿ ದಾಳಿ ವಿಫಲ ಬೆನ್ನಲ್ಲೇ ಜಮ್ಮುವಿನ ಹಲವು ಕಡೆಗಳಲ್ಲಿ ಪಾಕ್ ಶೆಲ್‌ ದಾಳಿ ನಡೆಸಿದ್ದು, ಮೂವರು ಬಲಿಯಾಗಿದ್ದಾರೆ. ಘಟನೆಯಲ್ಲಿ ಸುಮಾರು 6 ಮಂದಿ ಗಾಯಗೊಂಡಿದ್ದಾರೆ. ಪರಿಸ್ಥಿತಿ ಉದ್ವಿಗ್ನ ಬೆನ್ನಲ್ಲೇ ಪಂಜಾಬ್ ಹರ್ಯಾಣ, ರಾಜಸ್ಥಾನ ಸೇರಿದಂತೆ ಹಲವು ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಪಾಕಿಸ್ತಾನ ಉರಿ ವಲಯದ ಗಡಿ ನಿಯಂತ್ರಣ ರೇಖೆ (L O C) ಬಳಿ ಭಾರೀ ಪ್ರಮಾಣದ ಶೆಲ್ ದಾಳಿ ನಡೆಸಿದೆ. ಈ ದಾಳಿಯಲ್ಲಿ ಮಹಿಳೆಯೊಬ್ಬರ ಕಾರಿಗೆ ಶೆಲ್ ದಾಳಿಯಾಗಿ ಮೃತಪಟ್ಟಿದ್ದಾರೆ. ಆಕೆಯ ಕುಟುಂಬದ ಮೂವರು ಗಾಯಗೊಂ ಡಿದ್ದಾರೆ. ಮತ್ತೊಂದು ಘಟನೆಯಲ್ಲಿ ಪೂಂಛ ಜಿಲ್ಲೆಯ ಲೋರನ್ ಮತ್ತು ಮೆಂಧರ್ ವಲಯಗಳಲ್ಲಿ ನಡೆದ ಶೆಲ್ ದಾಳಿಯಲ್ಲಿ ವ್ಯಕ್ತಿ ಸಾವನ್ನಪ್ಪಿದ್ದು ಆತನ ಪತ್ನಿ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ

 

Related Articles

error: Content is protected !!