Home » ಉಗ್ರರ ಅಟ್ಟಹಾಸಕ್ಕೆ ದೇಶಾದ್ಯಂತ ಭುಗಿಲೆದ್ದ ಆಕ್ರೋಶ
 

ಉಗ್ರರ ಅಟ್ಟಹಾಸಕ್ಕೆ ದೇಶಾದ್ಯಂತ ಭುಗಿಲೆದ್ದ ಆಕ್ರೋಶ

ಪಾಪಿ ಪಾಕಿಗೆ ಪ್ರತಿಕಾರ ಆಗಲೇಬೇಕು

by Kundapur Xpress
Spread the love

ನವದೆಹಲಿ : 370ನೇ ವಿಧಿ ರದ್ದತಿಯ ಬಳಿಕ ಶಾಂತವಾಗಿ, ಪ್ರವಾಸಿಗರನ್ನು ಕೈಬೀಸಿ ತನ್ನತ್ತ ಕರೆಯುತ್ತಿದ್ದ ಜಮ್ಮು- ಕಾಶ್ಮೀರದಲ್ಲಿ ಮತ್ತೆ ಉಗ್ರರ ಬಂದೂಕು ಸದ್ದು ಮಾಡಿದ್ದು, 26 ಪ್ರವಾಸಿಗರನ್ನು ಬಲಿ ಪಡೆದಿದೆ. ಇದರ ವಿರುದ್ಧ ದೇಶಾದ್ಯಂತ ಜನಾಕ್ರೋಶ ಭುಗಿಲೆದ್ದಿದೆ. ಪಾಕ್ ಬೆಂಬಲಿತ ಉಗ್ರರ ವಿರುದ್ಧ ವಿದೇಶಗಳಲ್ಲೂ ಕೂಗು ಎದ್ದಿದೆ.

2016ರಲ್ಲಿ ಉರಿ ದಾಳಿ ಬಳಿಕ ನಡೆಸಲಾದ ಸರ್ಜಿಕಲ್ ಸ್ಟೈಕ್ ಹಾಗೂ 2019ರಲ್ಲಿ ಪುಲ್ವಾ ಮಾ ದಾಳಿ ಬಳಿಕ ಮಾಡಲಾದ ಬಾಲಾಕೋಟ್ ವಾಯು ದಾಳಿ ರೀತಿಯಲ್ಲೇ ಈ ಸಲವೂ ಉಗ್ರರ  ಮೇಲೆರಗಿ ಬಿಸಿ ಮುಟ್ಟಿಸಬೇಕು. 26 ಜನರ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳಬೇಕು ಎಂಬ ಬಲವಾದ ಆಗ್ರಹ ದೇಶಾದ್ಯಂತ ಕೇಳಿ ಬಂದಿದೆ. ಈ ಸಂಬಂಧ ಬುಧವಾರ ಭಾರತದಾದ್ಯಂತ ಪ್ರತಿಭಟನೆ, ಮೆರವಣಿಗೆ, ಖಂಡನಾ ಸಭೆಗಳು ನಡೆದಿವೆ. 35 ವರ್ಷ ಬಳಿಕ ಮೊದಲ ಬಾರಿ ಕಾಶ್ಮೀರದಲ್ಲೂ ಬಂದ್ ಆಚರಿಸಿ ಉಗ್ರರ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ.

 

Related Articles

error: Content is protected !!