74
ನವದೆಹಲಿ : ಪಹಲ್ಗಾಮ್ ದಾಳಿ ಬಳಿಕ ಪಾಕಿಸ್ತಾನದ ವಿರುದ್ದ ಕಠಿಣ ಹೆಜ್ಜೆಗಳನ್ನಿಡುತ್ತಿರುವ ಭಾರತ ಮತ್ತೊಂದು ನಿರ್ಧಾರ ಕೈಗೊಂಡಿದ್ದು, ಸುಳ್ಳು, ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ವಿಚಾರಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ಡಾನ್ ನ್ಯೂಸ್ ಸೇರಿದಂತೆ ಪಾಕಿಸ್ತಾನದ 16 ಯೂಟ್ಯೂಬ್ ಗಳನ್ನು ಚಾನೆಲ್ ಗಳನ್ನು ನಿಷೇಧಿಸಿದೆ.
ಕೇಂದ್ರವು ಪಾಕಿಸ್ತಾನದ ಡಾನ್ ನ್ಯೂಸ್, ಇರ್ಷಾದ್ ಭಟ್ಟಿ, ಸಮಾ ಟೀವಿ, ಸಮಾ ಸ್ಪೋರ್ಟ್ ಸೇರಿದಂತೆ 16 ಯೂಟ್ಯೂಬ್ ಚಾನೆಲ್‌ಗಳಿಗೆ ನಿರ್ಬಂಧ ವಿಧಿಸಿದೆ. ‘ಪಹಲ್ಲಾಮ್ ದಾಳಿ ಬಳಿಕ ಭಾರತ, ಸೇನೆ, ಭದ್ರತಾಪಡೆಗಳ ವಿರುದ್ಧ ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ವಿಷಯ, ಸುಳ್ಳು ಮತ್ತು ದಾರಿ ತಪ್ಪಿಸುವ ಮಾಹಿತಿಯನ್ನು ಪ್ರಸಾರ ಮಾಡಿದ್ದಕ್ಕಾಗಿ ಭಾರತ ಸರ್ಕಾರ ಪಾಕಿಸ್ತಾನದ ಯೂಟ್ಯೂಬ್ ಚಾನೆಲ್ ಗಳನ್ನು ನಿಷೇಧಿಸಿದೆ’ ಎಂದು ಗೃಹ ಇಲಾಖೆ ಹೇಳಿದೆ.

