215
ರಾಮೇಶ್ವರಂ : ಭಾನುವಾರದ ಶ್ರೀರಾಮನವಮಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಿಂದೂಗಳ ಪವಿತ್ರ ಕ್ಷೇತ್ರ ರಾಮೇಶ್ವರಂ ಅನ್ನು ಸಂಪರ್ಕಿಸುವ ನೂತನ ಪಾಂಬನ್ ರೈಲ್ವೆ ಸೇತುವೆಯನ್ನು ಉದ್ಘಾಟಿಸಲಿದ್ದಾರೆ.
ಈ ಹಿಂದೆ 1914ರಲ್ಲಿ ಬ್ರಿಟಿಷ್ ಕಾಲದಲ್ಲಿ ನಿರ್ಮಾಣಗೊಂಡಿದ್ದ ರೈಲ್ವೆ ಸೇತುವೆಯ ಮೂಲಕ ರಾಮೇಶ್ವರಂಗೆ ರೈಲು ಸಂಪರ್ಕ ಕಲ್ಪಿಸಲಾಗಿತ್ತು. ಆದರೆ ಆ ಸೇತುವೆ ಶಿಥಿಲಗೊಂಡ ಕಾರಣ 2022ರಲ್ಲಿ ರೈಲು ಸಂಪರ್ಕ ಸ್ಥಗಿತಗೊಳಿಸಲಾಗಿತ್ತು. ಅದರ ಸಮೀಪದಲ್ಲೇ 550 ಕೋಟಿ ರು. ವೆಚ್ಚದಲ್ಲಿ ಹೊಸ ಸೇತುವೆ ನಿರ್ಮಾಣ ಕಾರ್ಯ ನಡೆದು ಇದೀಗ ಪೂರ್ಣಗೊಂಡಿದೆ.
ಈಗಾಗಲೇ ಈ 2.08 ಕಿ.ಮೀ. ಉದ್ದದ ಸೇತುವೆಯಲ್ಲಿ ರೈಲುಗಳ ಪ್ರಾಯೋಗಿಕ ಸಂಚಾರ ಆರಂಭವಾಗಿದೆ. ಭಾನುವಾರ ರೈಲು ಸಂಚಾರಕ್ಕೂ ಮೋದಿ ಅವರು ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ

