Home » ನಾಳೆಯಿಂದ ಸಂಸತ್‌ ಮುಂಗಾರು ಅಧಿವೇಶನ
 

ನಾಳೆಯಿಂದ ಸಂಸತ್‌ ಮುಂಗಾರು ಅಧಿವೇಶನ

23ರಂದು ಪೂರ್ಣ ಪ್ರಮಾಣದ ಬಜೆಟ್

by Kundapur Xpress
Spread the love

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಜು.22ರಿಂದ ಆರಂಭವಾಗಲಿದ್ದು, ಆಗಸ್ಟ್.12ರ ವರೆಗೂ ನಡೆಯಲಿದೆ. ವಿತ್ತ ಸಚಿವೆ‌ ನಿರ್ಮಲಾ ಸೀತಾರಾಮನ್ ಜು.23ರಂದು ಕೇಂದ್ರ ಸರ್ಕಾರದ 2024-25ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದ್ದಾರೆ. ಅಧಿವೇಶನದ ಮೊದಲ ದಿನವಾದ ಸೋಮವಾರ ನಿರ್ಮಲಾ ಆರ್ಥಿಕ ಸಮೀಕ್ಷಾ ವರದಿ ಮಂಡಿಸಲಿದ್ದಾರೆ.

ಮುಂಗಾರು ಅಧಿವೇಶನದಲ್ಲಿ ಒಟ್ಟು ಆರು ಮಸೂದೆಗಳನ್ನು ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. 1934ರ ಏರ್‌ಕ್ರಾಫ್ಟ್ ಕಾಯ್ದೆಯನ್ನು ರದ್ದುಪಡಿಸಿ ಹೊಸ ಕಾಯ್ದೆ ತರಲು ಭಾರತೀಯ ವಾಯುಯಾನ ವಿಧೇಯಕ ಮಂಡಿಸಲಾಗುತ್ತದೆ. ಹಾಗೆಯೇ, 2024ನೇ ಸಾಲಿನ ಹಣ ಕಾಸು ಮಸೂದೆ, ಸ್ವಾತಂತ್ರ್ಯಪೂರ್ವಕ್ಕಿಂತ ಹಳೆಯ ಕಾಯ್ದೆಯನ್ನು ಬದಲಿಸಲು ಬಾಯ್ಸರ್ಸ್ ಮಸೂದೆ, ಕಾಫಿ ಮಸೂದೆ, ರಬ್ಬರ್ ಮಸೂದೆ ಮತ್ತು ವಿಪತ್ತು ನಿರ್ವಹಣೆ ತಿದ್ದುಪಡಿ ಮಸೂದೆಗಳನ್ನು ಮಂಡಿಸಿ ಅಂಗೀಕಾರ ಪಡೆಯಲು ನಿರ್ಧರಿಸಲಾಗಿದೆ.

ಈ ವರ್ಷದ ಫೆಬ್ರವರಿ ತಿಂಗಳಲ್ಲಿ 2024-25ನೇ ಸಾಲಿನ ಮಧ್ಯಂತರ ಬಜೆಟ್ ಅನ್ನು ನಿರ್ಮಲಾ ಸೀತಾರಾಮನ್ ಮಂಡಿಸಿದ್ದರು. ಬಳಿಕ ಲೋಕಸಭೆಗೆ ಚುನಾವಣೆ ನಡೆದಿತ್ತು. ಈಗ ಹೊಸ ಸರ್ಕಾರ ಬಂದಿರುವುದರಿಂದ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದ್ದಾರೆ. ಒಟ್ಟು 19 ದಿನಗಳ ಕಾಲ ಅಧಿವೇಶನ ನಡೆಯಲಿದೆ.

   

Related Articles

error: Content is protected !!