Home » ಇಂದಿನಿಂದ ಅಧಿವೇಶನ : ನಾಳೆ ಕೇಂದ್ರ ಬಜೆಟ್
 

ಇಂದಿನಿಂದ ಅಧಿವೇಶನ : ನಾಳೆ ಕೇಂದ್ರ ಬಜೆಟ್

by Kundapur Xpress
Spread the love

ನವದೆಹಲಿ : ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಮತ್ತು ಹೊಸ ಶಕ್ತಿಯೊಂದಿಗೆ ಸನ್ನದ್ಧವಾಗಿರುವ ಇಂಡಿಯಾ ಮೈತ್ರಿಕೂಟದ ನಡುವೆ ಭಾರೀ ವಾಕ್ಸಮರಕ್ಕೆ ವೇದಿಕೆಯಾಗುವ ನಿರೀಕ್ಷೆ ಇರುವ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಇಂದು ಚಾಲನೆ ಸಿಗಲಿದೆ.ಒಟ್ಟು 19 ದಿನಗಳ ಕಾಲ ಅಧಿವೇಶನ ನಡೆಯಲಿದೆ

ಮುಂಗಾರು ಅಧಿವೇಶನದ ಮೊದಲ ದಿನವಾದ ಸೋಮವಾರ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆರ್ಥಿಕ ಸಮೀಕ್ಷಾ ವರದಿ ಮಂಡಿಸಲಿದ್ದಾರೆ. ಜು.23ರ ಮಂಗಳವಾರ ನಿರ್ಮಲಾ ತಮ್ಮ ದಾಖಲೆಯ ಸತತ 7ನೇ ಬಜೆಟ್ ಮಂಡಿಸಲಿದ್ದಾರೆ

ಕೇಂದ್ರದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿರುವ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಹೊಸ ಕನಸುಗಳೊಂದಿಗೆ ಜನರ ಮುಂದೆ ಬರುವ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಮಂಗಳವಾರದ ಬಜೆಟ್ ಮೇಲೆ ಭಾರೀ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಈ ವರ್ಷದ ಫೆಬ್ರವರಿ ತಿಂಗಳಲ್ಲಿ 2024-25ನೇ ಸಾಲಿನ ಮಧ್ಯಂತರ ಬಜೆಟ್ ಅನ್ನು ನಿರ್ಮಲಾ ಸೀತಾರಾಮನ್ ಮಂಡಿಸಿದ್ದರು. ಬಳಿಕ ಲೋಕಸಭೆಗೆ ಚುನಾವಣೆ ನಡೆದಿತ್ತು. ಈಗ ಹೊಸ ಸರ್ಕಾರ ಬಂದಿರುವುದರಿಂದ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದ್ದಾರೆ.

   

Related Articles

error: Content is protected !!