Home » ಇಂದಿನಿಂದ ಚಳಿಗಾಲದ ಅಧಿವೇಶನ
 

ಇಂದಿನಿಂದ ಚಳಿಗಾಲದ ಅಧಿವೇಶನ

by Kundapur Xpress
Spread the love

ನವದೆಹಲಿ : ಆಡಳಿತರೂಢ ಎನ್‌ ಡಿ ಎ ಮೈತ್ರಿಕೂಟ ಮತ್ತು ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ನಡುವೆ ಭಾರೀ ವಾಕ್ಸಮರಕ್ಕೆ ವೇದಿಕೆಯಾಗುವ ಎಲ್ಲಾ ಸಾಧ್ಯತೆಗಳಿರುವ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಇಂದು ಸೋಮವಾರ ಚಾಲನೆ ಸಿಗಲಿದೆ. ಅಧಿವೇಶನದಲ್ಲಿ ಒಟ್ಟು 16 ಮಸೂದೆ ಮಂಡಿಸಲು ಸರ್ಕಾರದ ಸಿದ್ಧತೆ ನಡೆದಿದೆ. ಇದರಲ್ಲಿ ವಕ್ಸ್‌ ತಿದ್ದುಪಡಿ ಮಸೂದೆ ಮಂಡನೆ ಖಚಿತವಾಗಿದೆ. ಆದರೆ ಸರ್ಕಾರದ ಇನ್ನೊಂದು ಪ್ರಮುಖ ಯೋಜನೆಯಾದ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ ಬಗ್ಗೆ ಸರ್ಕಾರ ಪ್ರಸ್ತಾಪ ಮಾಡದಿದ್ದರೂ ಅದನ್ನು ಕೂಡಾ ಯಾವುದೇ ಹಂತದಲ್ಲಿ ಮಂಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಈ ನಡುವೆ ಸುಗಮ ಕಲಾಪದ ನಿಟ್ಟಿನಲ್ಲಿ `ವಿಪಕ್ಷಗಳ ಸಹಕಾರ ಕೋರಲು ಸರ್ಕಾರ ಭಾನುವಾರ ಸರ್ವಪಕ್ಷಗಳ ಸಭೆ ಆಯೋಜಿಸಿತ್ತು. ಇದರಲ್ಲೇ ವಿಪಕ್ಷಗಳು, ಅಧಿವೇಶನದ ಅವಧಿಯಲ್ಲಿ ಅದಾನಿ ಹಗರಣದ ಕುರಿತು ತನಿಖೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸುವ ಮೂಲಕ ಮುಂದಿನ ಅಧಿವೇಶನ ಎತ್ತ ಸಾಗಬಹುದು ಎಂಬ ಸುಳಿವು ನೀಡಿವೆ.

ಇದರ ಜೊತೆಗೆ ಇತ್ತೀಚಿನ ಮಣಿಪುರ ಗಲಭೆ ವಿಷಯ. ಆಹಾರ ಧಾನ್ಯಗಳ ಬೆಲೆ ಏರಿಕೆ ಮತ್ತಿತರೆ ವಿಷಯಗಳನ್ನು ಮುಂದಿಟ್ಟುಕೊಂಡು ಸರ್ಕಾರದ ಮೇಲೆ ಮುಗಿಬೀಳಲು ವಿಪಕ್ಷಗಳು ಸಜ್ಜಾಗಿವೆ. ಹೀಗಾಗಿ ಮೊದಲ ದಿನದಿಂದಲೇ ಕಲಾಪಗಳು ಕಾವೇರುವ ನಿರೀಕ್ಷೆ ಇದೆ

ಅದಾನಿ ಅವರು ತಮ್ಮ ಕಂಪನಿ ಉತ್ಪಾದಿಸಿದ ಸೌರ ವಿದ್ಯುತ್ ಮಾರಾಟಕ್ಕೆ ಕೆಲ ರಾಜ್ಯ ಸರ್ಕಾರಗಳ ಅಧಿಕಾರಿಗಳಿಗೆ 2100 ಕೋಟಿ ರು. ಲಂಚ ನೀಡಿದರು ಎಂದು ಅಮೆರಿಕದಲ್ಲಿ ದೋಷಾರೋಪ ಹೊರಿಸಲಾ ಗಿದೆ. ‘ಹೀಗಾಗಿ ಆದಾನಿಗೆ ಪ್ರಧಾನಿ ನರೇಂದ್ರ ಮೋದಿ, ಶ್ರೀರಕ್ಷೆ ಇದೆ ಎಂದು ಆರೋಪಿಸಿ ವಿಪಕ್ಷಗಳು ಗದ್ದಲ ಎಬ್ಬಿಸುವ ಸಂಭವವಿದೆ.

   

Related Articles

error: Content is protected !!