Home » ನೀರಾವರಿ ಬೇಡಿಕೆಗಳಿಗೆ ತುರ್ತು ಅನುಮೋದನೆ ನೀಡಿ
 

ನೀರಾವರಿ ಬೇಡಿಕೆಗಳಿಗೆ ತುರ್ತು ಅನುಮೋದನೆ ನೀಡಿ

ಸಿ ಎಂ ಸಿದ್ದು

by Kundapur Xpress
Spread the love

ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಮೇಕೆದಾಟು ಸಮತೋಲನ ಜಲಾಶಯ ಮತ್ತು ಕಳಸಾ ಬಂಡೂರಿ ಯೋಜನೆಗಳಿಗೆ ತುರ್ತು ಅನುಮತಿ ನೀಡುವಂತೆ ಮನವಿ ಮಾಡಿದರು. ಅಲ್ಲದೆ, ನಬಾರ್ಡ್ ನೆರವು ಹೆಚ್ಚಳಕ್ಕೆ ಆಗ್ರಹಿಸಿದರು.

ದೆಹಲಿಯ ಪಾರ್ಲಿಮೆಂಟ್ ಕಾಂಪ್ಲೆಕ್ಸ್‌ ನಲ್ಲಿ ನಡೆದ ಸಭೆಯಲ್ಲಿ ಕೃಷಿ, ಜಲಸಂಪನ್ಮೂಲ ಮತ್ತು ನಗರ ಮೂಲಸೌಕರ್ಯ ಸೇರಿದಂತೆ ನಿರ್ಣಾಯಕ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸುವ ಹಲವಾರು ವಿಷಯಗಳಿಗೆ ಕೇಂದ್ರ ಸರ್ಕಾರ ತುರ್ತು ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿಯನ್ನು ಅವರು ಒತ್ತಾಯಿಸಿದರು. ಉಪಮು ಖ್ಯಮಂತ್ರಿ, ನೀರಾವರಿ ಸಚಿವ ಡಿ.ಕೆ.ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾರ್ಜ್ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸಿಎಂ ಜತೆ ಹಾಜರಿದ್ದರು.

ನಬಾರ್ಡ್ ನೆರವು ಹೆಚ್ಚಳಕ್ಕೆ ಮನವಿ : 

ರಾಜ್ಯಕ್ಕೆ ನಬಾರ್ಡ್ ನೆರವು ಕಡಿತಗೊಳಿಸಿರುವುದರಿಂದ ರಾಜ್ಯದ ರೈತಾಪಿ ವರ್ಗ ಸಂಕಷ್ಟಕ್ಕೆ ಸಿಲುಕಿದೆ  2023-24ರ ಸಾಲಿನಲ್ಲಿ 5,600 ಕೋಟಿ ರು.ಗಳನ್ನು ಮಂಜೂರು ಮಾಡಲಾಗಿತ್ತು. ಆದರೆ, 2024 -25ರ ಸಾಲಿನಲ್ಲಿ ಕೇವಲ 2,340 ಕೋಟಿ ರು.ಗಳನ್ನು ಮಂಜೂರು ಮಾಡಲಾಗಿದೆ. ಇದರಿಂದಾಗಿ ನಬಾರ್ಡ್ ನೆರವು ಪ್ರಸಕ್ತ ಸಾಲಿನಲ್ಲಿ ಶೇ.58ರಷ್ಟು ಕಡಿತವಾಗಿದೆ.

ಈ ಹಿನ್ನೆಲೆಯಲ್ಲಿ ನಬಾರ್ಡ್ ನೆರವು ಹೆಚ್ಚಳಕ್ಕೆ ಆಗ್ರಹಿಸಿ ಈಗಾಗಲೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಲಾಗಿದೆ. ಹೀಗಾಗಿ, ತಾವು ಹಣಕಾಸು ಸಚಿವಾಲಯಕ್ಕೆ ಈ ಬಗ್ಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು. 

 

Related Articles

error: Content is protected !!