Home » ಫೆ. 24ಕ್ಕೆ ಪಿಎಂ ಕಿಸಾನ್‌ 19ನೇ ಕಂತು ಬಿಡುಗಡೆ
 

ಫೆ. 24ಕ್ಕೆ ಪಿಎಂ ಕಿಸಾನ್‌ 19ನೇ ಕಂತು ಬಿಡುಗಡೆ

by Kundapur Xpress
Spread the love

ಹೊಸದಿಲ್ಲಿ : ಕೃಷಿಕ ಸಮುದಾಯದ ಆದಾಯ ಹೆಚ್ಚಿಸುವ ಸರ್ಕಾರದ ಪ್ರಯತ್ನದ ಭಾಗವಾಗಿ ಸುಮಾರು 22,000 ಕೋಟಿ ರೂ.ಗಳನ್ನು ನೇರವಾಗಿ 9.8 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸುವ ಪಿಎಂ-ಕಿಸಾನ್ ಯೋಜನೆಯ 19ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬಿಡುಗಡೆ ಮಾಡಲಿದ್ದಾರೆ.

ಯೋಜನೆಯಲ್ಲಿ ಪ್ರತಿ ಫಲಾನುಭವಿಯು ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳ ಮೂರು ಸಮಾನ ಕಂತುಗಳಲ್ಲಿ ವಾರ್ಷಿಕ 6,000 ರೂ.ಗಳ ಪ್ರಯೋಜನ ಪಡೆಯುತ್ತಾನೆ

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಫೆಬ್ರವರಿ 24ರಂದು ಬಿಹಾರದ ಭಾಗಲ್ಪುರದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಧಾನಿಯವರು ಪಿಎಂ-ಕಿಸಾನ್ ನ 19 ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ 

ಈ ಮೊತ್ತವನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗುವುದು. 9.8 ಕೋಟಿ ರೈತರಿಗೆ ಒಟ್ಟು 22,000 ಕೋಟಿ ರೂ.ಗಳನ್ನು ವಿತರಿಸಲಾಗುವುದು ಎಂದು ಅವರು ಹೇಳಿದರು

 

Related Articles

error: Content is protected !!