Home » ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಭೇಟಿ
 

ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಭೇಟಿ

by Kundapur Xpress
Spread the love

ಹೊಸದಿಲ್ಲಿ: ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿವರು ರಾಷ್ಟ್ರಪತಿ ದೌಪದಿ ಮುರ್ಮು ಅವರನ್ನು ಭಾನುವಾರ ಭೇಟಿಯಾದರು. ಬಿಹಾರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐ ಆರ್) ವಿಚಾರದ ಬಗ್ಗೆ ಚರ್ಚೆಗೆ ಪ್ರತಿಪಕ್ಷಗಳ ಬೇಡಿಕೆ ಬಗ್ಗೆ ಸಂಸತ್ತಿನಲ್ಲಿ ಕೋಲಾಹಲದ ಹಿನ್ನೆಲೆಯಲ್ಲಿ ಈ ಸಭೆ ನಡೆದಿದೆ ಎಂದು ಮೂಲಗಳು ತಿಳಿಸಿವೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದಿಂದ ರಫ್ತು ಮಾಡುವ ವಸ್ತುಗಳ ಮೇಲೆ ಶೇ.25ರಷ್ಟು ಸುಂಕವನ್ನು ಮತ್ತು ಭಾರತ ರಷ್ಯಾದ ಮಿಲಿಟರಿ ಉಪಕರಣಗಳು ಮತ್ತು ತೈಲವನ್ನು ಖರೀದಿಸಿರುವುದರಿಂದ ಅನಿರ್ದಿಷ್ಟ ದಂಡವನ್ನು ಘೋಷಿಸಿದ ಬೆನ್ನಲ್ಲೇ ಈ ಸಭೆ ನಡೆದಿ ರುವುದು ಇನ್ನಷ್ಟು ಕುತೂಹಲಕ್ಕೆ ಎಡೆ ಮಾಡಿಕೊ ಟ್ಟಿದೆ. ಪ್ರಧಾನಿ ಭೇಟಿ ಬೆನ್ನಲ್ಲೇ ಕೇಂದ್ರ ಗೃಹಸಚಿವ ಅಮಿತ್ ಶಾ ಕೂಡ ರಾಷ್ಟ್ರಪತಿ ಮುರ್ಮು ಅವರನ್ನು ಭೇಟಿ ಮಾಡಿದ್ದಾರೆ.

 

Related Articles

error: Content is protected !!