Home » ಖಲಿಸ್ಥಾನಿಗಳ ವಿರುದ್ದ ಕ್ರಮಕ್ಕೆ ಭಾರತ ಆಗ್ರಹ
 

ಖಲಿಸ್ಥಾನಿಗಳ ವಿರುದ್ದ ಕ್ರಮಕ್ಕೆ ಭಾರತ ಆಗ್ರಹ

by Kundapur Xpress
Spread the love

ನವದೆಹಲಿ : ಭಾರತ ವಿರೋಧಿ ನಿಲುವು ಹೊಂದಿರುವ ಖಲಿಸ್ತಾನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಭಾರತವು ಅಮೆರಿಕ ಮತ್ತು ನ್ಯೂಜಿಲೆಂಡ್‌ಗೆ ಆಗ್ರಹಿಸಿದೆ. ನ್ಯೂಜಿಲೆಂಡ್ ಪ್ರಧಾನಿ ಭೇಟಿ ವೇಳೆ ಪ್ರಧಾನಿ ಮತ್ತು ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ಭೇಟಿ ವೇಳೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ಆಗ್ರಹ ಮಾಡಿದ್ದಾರೆ.

ಭಾರತ ಪ್ರವಾಸದಲ್ಲಿರುವ ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಪ‌ರ್ ಲಕ್ಸನ್ ಅವರನ್ನು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದರು. ಈ ವೇಳೆ ನ್ಯೂಜಿಲೆಂಡ್ ನಲ್ಲಿ ಕೆಲವು ಕಾನೂನುಬಾಹಿರ ಶಕ್ತಿಗಳ ಭಾರತ ವಿರೋಧಿ ಚಟುವಟಿಕೆಗಳ ಬಗ್ಗೆ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಖಲಿಸ್ತಾನಿ ಮಟ್ಟ ಹಾಕಲು ನ್ಯೂಜಿಲೆಂಡ್ ಸರ್ಕಾರದ ಸಹಾಯ ಕೋರಿದ್ದಾರೆ.

ಇನ್ನು ಭಾರತ ಪ್ರವಾಸದಲ್ಲಿರುವ ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಜೊತೆಗಿನ ಭೇಟಿ ವೇಳೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖಲಿಸ್ತಾನಿ ವಿಚಾರ ಪ್ರಸ್ತಾಪಿಸಿದ್ದಾರೆ. ಅಮೆರಿಕದಲ್ಲಿ ಖಲಿಸ್ತಾನಿ ಸಂಘಟನೆ ಸಿಖ್ ಫಾರ್ ಜಸ್ಟೀಸ್‌ನ ಭಾರತ ವಿರೋಧಿ ಚಟುವಟಿಕೆಗಳನ್ನು ಹತ್ತಿಕ್ಕುವಂತೆ ಸಲಹೆ ನೀಡಿದ್ದಾರೆ.

 

Related Articles

error: Content is protected !!